ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ.) ಬೆಂಗಳೂರು ವತಿಯಿಂದ ಕುಂದಾಪುರ ತಾಲ್ಲೂಕಿನ 74ನೇ ಉಳ್ಳೂರು ಗ್ರಾಮದಲ್ಲಿ 2.5 ಕೋಟಿ ರೂಪಾಯಿ ವೆಚ್ಚದಲ್ಲಿ ಕೊರಗರ ಕಾಲೋನಿಯಲ್ಲಿ ನಿರ್ಮಾಣವಾಗಲಿರುವ 14 ಮನೆಗಳ ನಿರ್ಮಾಣ ಕಾಮಗಾರಿಗೆ ಪೇಜಾವರ ಮಠದ ಪೂಜ್ಯ ಶ್ರೀ ಶ್ರೀ ಶ್ರೀ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಅವರ ಅಮೃತಹಸ್ತದಿಂದ ಭೂಮಿ ಪೂಜೆ ಮತ್ತು ಶಿಲಾನ್ಯಾಸ ಕಾರ್ಯಕ್ರಮ ನೆರವೇರಿತು.

ಈ ಸಂದರ್ಭದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಶ್ರೀ ಕಿರಣ್ ಕುಮಾರ್ ಕೊಡ್ಗಿ, ಗುರುರಾಜ್ ಶೆಟ್ಟಿ ಗಂಟಿಹೊಳೆ, ಹೆಗ್ಗುಂಜೆ ರಾಜೀವ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷರಾದ ಡಾ| ಹೆಚ್. ಎಸ್. ಶೆಟ್ಟಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.