ಪುಣೆ ಬಂಟರ ಸಂಘದ ನೂತನ ಅಧ್ಯಕ್ಷ ಕೆಂಜಾರು ಅಜಿತ್ ಹೆಗ್ಡೆ ಹಾಗೂ ಮಹಿಳಾ ವಿಭಾಗದ ಅಧ್ಯಕ್ಷೆ ಶಮ್ಮಿ ಅಜಿತ್ ಹೆಗ್ಡೆ ಅವರನ್ನು ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ವತಿಯಿಂದ ನಡೆದ ಬಿಸು ಕಾರ್ಯಕ್ರಮದಲ್ಲಿ ಟ್ರಸ್ಟ್ ಗೌರವಾಧ್ಯಕ್ಷ ಡಾ ಎ ಸದಾನಂದ ಶೆಟ್ಟಿಯವರ ಉಪಸ್ಥಿತಿಯಲ್ಲಿ ಸನ್ಮಾನಿಸಿದರು.ಈ ಸಂಧರ್ಭ ಟ್ರಸ್ಟ್ ಕಾರ್ಯಾಧ್ಯಕ್ಷ ದೇವಿಚರಣ್ ಶೆಟ್ಟಿ, ಮಹಿಳಾ ವಿಭಾಗದ ಅಧ್ಯಕ್ಷೆ ವಿಜಯಲಕ್ಷ್ಮಿ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಲೋಕಯ್ಯ ಶೆಟ್ಟಿ, ಜೆಪ್ಪು ಬಂಟರ ಸಂಘದ ಅಧ್ಯಕ್ಷ ವಸಂತ ಶೆಟ್ಟಿ, ಗುರುಪುರ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಶೆಟ್ಟಿ, ಕದ್ರಿ ನವನೀತ ಶೆಟ್ಟಿ, ಭಾಸ್ಕರ ರೈ ಕುಕ್ಕುವಳ್ಳಿ, ರಾಜಗೋಪಾಲ್ ರೈ, ಪ್ರಸಾದ್ ರೈ ಕಲ್ಲಿಮಾರ್ ಮತ್ತಿತರರು ಉಪಸ್ಥಿತರಿದ್ದರು.
