ಬಂಟರ ಸಂಘ ಮುಂಬಯಿ ಸಂಚಾಲಕತ್ವದ ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ವತಿಯಿಂದ ಎಂ.ಆರ್.ಜಿ ಗ್ರೂಪ್ ಕಾರ್ಯಾಧ್ಯಕ್ಷ ಮತ್ತು ಆಡಳಿತ ನಿರ್ದೇಶಕ, ಸಮಾಜ ಸೇವಕ ಡಾ| ಕೆ ಪ್ರಕಾಶ್ ಶೆಟ್ಟಿ ಬಂಜಾರ ಅವರನ್ನು ಸನ್ಮಾನಿಸಲಾಯಿತು. ಎಪ್ರಿಲ್ 14ರಂದು ನಡೆದ ಬಿಸು ಪರ್ಬ ಸಮಾರಂಭದಲ್ಲಿ ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಕಾರ್ಯಾಧ್ಯಕ್ಷ ಉಳ್ತೂರು ಮೋಹನ್ ದಾಸ್ ಶೆಟ್ಟಿ ನೇತೃತ್ವದಲ್ಲಿ ಮಾತೃಭೂಮಿಯ ಬೆಳವಣಿಗೆಗೆ ಮತ್ತು ವ್ಯವಹಾರ ಅಭಿವೃದ್ಧಿಗೆ ಸಾರ್ವಕಾಲಿಕ ಬೆಂಬಲ ನೀಡಿದಕ್ಕಾಗಿ ಪ್ರಕಾಶ್ ಶೆಟ್ಟಿ ಅವರನ್ನು ಶಾಲು ಹೊದಿಸಿ ಫಲಪುಷ್ಪ ಸ್ಮರಣಿಕೆಯನ್ನು ನೀಡಿ ಸನ್ಮಾನಿಸಲಾಯಿತು.ಈ ಸಂದರ್ಭ ಬಂಟರ ಸಂಘ ಮುಂಬಯಿಯ ಅಧ್ಯಕ್ಷ ಮತ್ತು ಮಾತೃಭೂಮಿ ಸೊಸೈಟಿಯ ನಿರ್ದೇಶಕ ಪ್ರವೀಣ್ ಭೋಜ ಶೆಟ್ಟಿ, ವಿಶ್ವ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮಾತೃಭೂಮಿ ಸೊಸೈಟಿ ನಿರ್ದೇಶಕ ಮತ್ತು ಬಂಟರ ಸಂಘ ಮುಂಬಯಿಯ ಉಪಾಧ್ಯಕ್ಷ ಮಹೇಶ್ ಶೆಟ್ಟಿ, ಮಾತೃಭೂಮಿ ಸೊಸೈಟಿ ಉಪ ಕಾರ್ಯಾಧ್ಯಕ್ಷ ಹಾಗೂ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್ ಕೆ ಶೆಟ್ಟಿ, ಬಂಟರ ಸಂಘದ ಕೋಶಾಧಿಕಾರಿ ಸಿಎ ರಮೇಶ್ ಶೆಟ್ಟಿ, ಮಾತೃಭೂಮಿಯ ಕಾರ್ಯದರ್ಶಿ ಕಿಶೋರ್ ಕುಮಾರ್ ಶೆಟ್ಟಿ ಕುತ್ಯಾರು, ಕೋಶಾಧಿಕಾರಿ ಸಿಎ ಹರೀಶ್ ಡಿ ಶೆಟ್ಟಿ, ನಿರ್ದೇಶಕರಾದ ಸುನಂದ ಡಿ ಶೆಟ್ಟಿ, ಸಿಎ ರಾಜಶ್ರೀ ಜಿ ಶೆಟ್ಟಿ, ಪೊವಾಯಿ ಶಿಕ್ಷಣ ಸಂಸ್ಥೆಯ ಕಾರ್ಯಾಧ್ಯಕ್ಷ ರತ್ನಾಕರ ಶೆಟ್ಟಿ ಮುಂಡ್ಕೂರು, ಮಾತೃಭೂಮಿಯ ಮಾಜಿ ಕಾರ್ಯಾಧ್ಯಕ್ಷ ಸಿಎ ಶಂಕರ್ ಬಿ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಮಾಜಿ ಅಧ್ಯಕ್ಷ ಉಪೇಂದ್ರ ಶೆಟ್ಟಿ, ಬಂಟರ ಸಂಘದ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಿತ್ರ ಆರ್ ಶೆಟ್ಟಿ, ನವೀನ್ ಶೆಟ್ಟಿ ಇನ್ನಾ ಬಾಳಿಕೆ, ಯುವ ಬಂಟರ ಸಂಘದ ಕಾರ್ಯಾಧ್ಯಕ್ಷ ಸವಿನ್ ಜೆ ಶೆಟ್ಟಿ, ಸಲಹಾ ಮಂಡಳಿಯ ಸದಸ್ಯರು ಮೊದಲಾದವರು ಉಪಸ್ಥಿತರಿದ್ದರು.
