ಪ್ರತಿಷ್ಠಿತ ವಿಜಯ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷೆಯಾಗಿ ಶಮೀನಾ ಆಳ್ವ ಅವರು ಆಯ್ಕೆಯಾಗಿದ್ದಾರೆ. ಅವರು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷೆಯಾಗಿ ಸೇವೆ ಸಲ್ಲಿಸಿದ್ದರು. ಪ್ರಸಕ್ತ ಮುಲ್ಕಿ ವಿಜಯ ಕಾಲೇಜು ವಿಶ್ವಸ್ಥ ಮಂಡಳಿಯ ಸದಸ್ಯರಾಗಿ ಕಾಲೇಜಿನ ಅಭಿವೃದ್ಧಿ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ. ತುಳುನಾಡು ಬಂಟರ ಮಹಿಳಾ ಸಂಘದ ಅಧ್ಯಕ್ಷೆ, ತುಳುವೆರೆ ಆಯನ ಕೂಟ (ರಿ)ದ ಅಧ್ಯಕ್ಷೆಯಾಗಿ ಸಾಮಾಜಿಕ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.

ವಿಜಯ ಕಾಲೇಜು ಅಲೆ ವಿದ್ಯಾರ್ಥಿ ಸಂಘದ ನೂತನ ಅಧ್ಯಕ್ಷೆಯಾಗಿ ಆಯ್ಕೆಯಾದ ಶಮೀನಾ ಆಳ್ವರನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ, ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಡಾ ಎ ಸದಾನಂದ ಶೆಟ್ಟಿ, ತುಳು ವರ್ಲ್ಡ್ ಸ್ಥಾಪಕಾಧ್ಯಕ್ಷ ಡಾ ರಾಜೇಶ್ ಆಳ್ವ ಮತ್ತಿತರರು ಅಭಿನಂದಿಸಿದ್ದಾರೆ.