ಶ್ರೀ ಮಹಾಗಣಪತಿ ದೇವಸ್ಥಾನ ಗಣೇಶಪುರ ಕಾಟಿಪಳ್ಳ ಇಲ್ಲಿ ಎಪ್ರಿಲ್ 18 ರಿಂದ 26 ರವರೆಗೆ ಬ್ರಹ್ಮಕಲಶೋತ್ಸವ, ಬ್ರಹ್ಮ ರಥೋತ್ಸವ, ನಾಗಮಂಡಲೋತ್ಸವ ನಡೆಯುತ್ತಿದ್ದು, ಪ್ರತೀ ದಿನ ಧಾರ್ಮಿಕ ಸಮಾರಂಭ ನಡೆಯುತ್ತಿದೆ. ಎಪ್ರಿಲ್ 22 ರಂದು ನಡೆದ ಧಾರ್ಮಿಕ ಸಮಾರಂಭದಲ್ಲಿ ಮಹಾದಾನಿ, ಮುಂಬಯಿ ಉದ್ಯಮಿ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ಅನಿಲ್ ಶೆಟ್ಟಿ ತೇವು ಸೂರಿಂಜೆ ಅವರನ್ನು ಸನ್ಮಾನಿಸಲಾಯಿತು.

ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಕ್ಷೇತ್ರಗಳಲ್ಲಿ ತನ್ನನ್ನು ಸಕ್ರೀಯವಾಗಿ ತೊಡಗಿಸಿಕೊಳ್ಳುತ್ತಿರುವ ಅನಿಲ್ ಶೆಟ್ಟಿ ಅವರ ಸೇವಾ ಸಾಧನೆಯನ್ನು ಗುರುತಿಸಿ ಗಣೇಶಪುರ ಮಹಾಗಣಪತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಮಾರಂಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಈ ಸಂಧರ್ಭ ಥಾಣೆ ಬಂಟ್ಸ್ ಅಸೋಸಿಯೇಷನ್ ನ ಮಾಜಿ ಅಧ್ಯಕ್ಷ ವೇಣುಗೋಪಾಲ್ ಎಲ್ ಶೆಟ್ಟಿ, ಸುರತ್ಕಲ್ ಬಂಟರ ಸಂಘದ ನಿರ್ದೇಶಕ ದೇವೇಂದ್ರ ಕೆ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.