ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ದಿಲ್ ರಾಜ್ ಆಳ್ವ ಆಯ್ಕೆಯಾಗಿದ್ದಾರೆ. ದಿಲ್ ರಾಜ್ ಆಳ್ವ ಅವರು ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡು ಸಕ್ರೀಯರಾಗಿದ್ದಾರೆ.

ಅವರು ದ.ಕ. ಜಿಲ್ಲಾ ಬಸ್ಸು ಮಾಲಕರ ಸಂಘದ ಅಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಸಮಾಜಪರ ಚಿಂತನೆಯುಳ್ಳ ದಿಲ್ ರಾಜ್ ಆಳ್ವರವರು ಧಾರ್ಮಿಕ ಕ್ಷೇತ್ರಗಳಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಈಗ ಕದ್ರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ.