ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ “ನವೋದಯ ಸ್ವ ಸಹಾಯ ಗುಂಪುಗಳ 25ನೇ ವರ್ಷದ ರಜತ ಸಂಭ್ರಮ”ದ ಕಾರ್ಯಕ್ರಮವು ಮೇ 10 ರಂದು ಗೋಲ್ಡ್ ಫಿಂಚ್ ಸಿಟಿ ಮಂಗಳೂರು ಇಲ್ಲಿ ಜರಗಿತು. ಕಾರ್ಯಕ್ರಮವನ್ನು ಕರ್ನಾಟಕದ ರಾಜ್ಯಪಾಲರದ ಥಾವರ್ ಚಂದ್ ಗೆಹ್ಲೊಟ್ ರವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪೇಜಾವರ ಶ್ರೀಗಳು, ಡಿ.ಕೆ. ಶಿವಕುಮಾರ್, ಡಾ.ವೀರೇಂದ್ರ ಹೆಗ್ಗಡೆ, ಡಾ. ಎಂ.ಎನ್ ರಾಜೇಂದ್ರಕುಮಾರ್, ಯು ಟಿ. ಖಾದರ್, ಕೋಟಾ ಶ್ರೀನಿವಾಸ್ ಪೂಜಾರಿ, ಅಶೋಕ್ ಕುಮಾರ್ ರೈ ಪುತ್ತೂರು, ವೇದವ್ಯಾಸ್ ಕಾಮತ್, ಐವನ್ ಡಿಸೋಜ, ಯಶ್ ಪಾಲ್ ಸುವರ್ಣ, ಸುರೇಶ್ ಶೆಟ್ಟಿ ಗುರ್ಮೆ, ರಮಾನಾಥ್ ರೈ, ಮಿಥುನ್ ರೈ, ಮತ್ತು ಲಕ್ಷ್ಮಿ ಹೆಬ್ಬಾಳ್ಕರ್ ಇವರುಗಳು ಜೊತೆಗಿದ್ದರು.

ಕಾರ್ಯಕ್ರಮದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರನ್ನು ಟ್ರಸ್ಟ್ ನ ಸಂಸ್ಥಾಪಕರಾದ ಡಾ. ಎಂ. ಎನ್. ರಾಜೇಂದ್ರಕುಮಾರ್ ರವರು ಗೌರವಿಸಿದರು. ಈ ಸಂದರ್ಭದಲ್ಲಿ ಶಶಿಕುಮಾರ್ ರೈ ಬಾಲ್ಯೊಟ್ಟು, ಡಾ. ದೇವಿಪ್ರಸಾದ್ ಶೆಟ್ಟಿ ಬೆಳಪು, ಜಯಕರ್ ಶೆಟ್ಟಿ ಇಂದ್ರಾಳಿ, ಜಯಪ್ರಕಾಶ್ ಶೆಟ್ಟಿ ತುಂಬೆ, ಸುಚರಿತ ಶೆಟ್ಟಿ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.