ಶಿರ್ವ ಮಾರಿಗುಡಿ ಶ್ರೀ ಮಹಮ್ಮಾಯಿ ಅಮ್ಮನವರ ಸಾನಿದ್ಯದ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪ್ರಯುಕ್ತ ಕಾಣಿಯೂರು ಮಠದ ಶ್ರೀ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ಧಾರ್ಮಿಕ ಸಭಾ ಕಾರ್ಯಕ್ರಮವು ಬಹಳ ವಿಜೃಂಭಣೆಯಿಂದ ನಡೆಯಿತು.ಈ ಸಂದರ್ಭದಲ್ಲಿ ಎಂ.ಆರ್.ಜಿ ಗ್ರೂಪ್ ನ ಸಿಎಂಡಿ ಡಾ| ಕೆ ಪ್ರಕಾಶ್ ಶೆಟ್ಟಿ, ಹೆರಂಭ ಕೆಮಿಕಲ್ಸ್ ನ ಸಿಎಂಡಿ ಡಾ| ಸದಾಶಿವ ಶೆಟ್ಟಿ ಕನ್ಯಾನ, ಉದಯ ಸುಂದರ ಶೆಟ್ಟಿ, ವೆಜ್ ಟ್ರೀಟ್ ಹೊಟೇಲ್ಸ್ ನ ಸಿಎಂಡಿ ರವಿ ಸಾಧು ಶೆಟ್ಟಿ, ಉದ್ಯಮಿ ನಿತ್ಯಾನಂದ ಹೆಗ್ಡೆ, ಕಾಂಗ್ರೆಸ್ ಮುಖಂಡ ಉದಯ್ ಕುಮಾರ್ ಶೆಟ್ಟಿ ಮುನಿಯಾಲ್, ಬೆಂಗಳೂರು ಬಂಟರ ಸಂಘದ ಶ್ರೀಮತಿ ಕಾಂತಿ ಶೆಟ್ಟಿ, ಸಂಗೀತಾ ಮುಂತಾದ ಅತಿಥಿ ಗಣ್ಯರು ಉಪಸ್ಥಿತರಿದ್ದರು. ವಿವಿಧ ಕ್ಷೇತ್ರದ ಸಾಧಕರನ್ನು ಈ ಸಂಧರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
