ಬೊಳ್ಳಿ ಮೂವೀಸ್ ಮತ್ತು ಅವಿಕಾ ಪ್ರೊಡಕ್ಷನ್ ಲಾಂಛನದಲ್ಲಿ ತಯಾರಾಗುತ್ತಿರುವ “ಟಾಸ್” ತುಳು ಮತ್ತು ಕನ್ನಡ ಚಲನಚಿತ್ರದ ಮುಹೂರ್ತ ಸಮಾರಂಭ ಶರವು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಜರಗಿತು. ಶರವು ಶ್ರೀ ಮಹಾಗಣಪತಿ ದೇವಸ್ಥಾದ ಪ್ರಧಾನ ಅರ್ಚಕರಾದ ರಾಘವೇಂದ್ರ ಶಾಸ್ತ್ರಿ ಆಶೀರ್ವಚನ ನೀಡಿದರು. ಡಾ| ದೇವದಾಸ ಕಾಪಿಕಾಡ್, ವಿಜಯಕುಮಾರ್ ಕೊಡಿಯಾಲ್ ಬೈಲ್, ಸುತ್ತೇಜ್ ಶೆಟ್ಟಿ, ಕ್ಯಾಟ್ಕಾದ ಅಧ್ಯಕ್ಷ ಲಂಚೂಲಾಲ್, ಶರ್ಮಿಳಾ ಕಾಪಿಕಾಡ್, ಶೋಭರಾಜ್ ಪಾವೂರು, ಬಾಳ ಜಗನ್ನಾಥ ಶೆಟ್ಟಿ, ಮಣಿಕಾಂತ್ ಕದ್ರಿ, ಅನೂಪ್ ಸಾಗರ್, ಯತೀಶ್ ಪೂಜಾರಿ, ನಿತೇಶ್ ಸುವರ್ಣ, ಕೃತಿ ಶೆಟ್ಟಿ, ಚೈತ್ರ ಶೆಟ್ಟಿ ಉಪಸ್ಥಿತರಿದ್ದರು.ರಾಜ್ಯ ಪ್ರಶಸ್ತಿ ಪುರಸ್ಜೃತ ತೆಲಿಕೆದ ಬೊಳ್ಳಿ ಡಾ| ದೇವದಾಸ್ ಕಾಪಿಕಾಡ್ ರಚನೆ ಸಂಭಾಷಣೆ, ಅರ್ಜುನ್ ಕಾಪಿಕಾಡ್ ನಿರ್ದೇಶನ ಮತ್ತು ಅಭಿನಯದ ಟಾಸ್ ಸಿನಿಮಾದ ಚಿತ್ರೀಕರಣ ಎರಡು ಹಂತಗಳಲ್ಲಿ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸಿನಿಮಾದ ಚಿತ್ರೀಕರಣ ನಡೆಯಲಿದೆ. ತಾರಾಗಣದಲ್ಲಿ ಡಾ| ದೇವದಾಸ್ ಕಾಪಿಕಾಡ್, ಅರ್ಜುನ್ ಕಾಪಿಕಾಡ್, ನವೀನ್ ಡಿ ಪಡೀಲ್, ಭೋಜರಾಜ್ ವಾಮಂಜೂರ್, ಅರವಿಂದ್ ಬೋಳಾರ್, ಶಶಿರಾಜ್ ಕಾವೂರು, ಸುತ್ತೇಜ್ ಶೆಟ್ಟಿ, ಶೋಭರಾಜ್ ಪಾವೂರ್, ಚೈತ್ರ ಶೆಟ್ಟಿ, ಕೃತಿ ಶೆಟ್ಟಿ ಅಭಿನಯಿಸಲಿದ್ದಾರೆ.
