ಡಾ| ಹರ್ಷಕುಮಾರ್ ರೈ ಮಾಡಾವು ಸಾರಥ್ಯದ ಜನ್ಮ ಕ್ರಿಯೇಷನ್ಸ್ ಸಂಸ್ಥೆ ಹೊಸ ಪ್ರತಿಭೆಗಳನ್ನು, ಯುವ ಕಲಾವಿದರನ್ನು ಪ್ರೋತ್ಸಾಹಿಸುವ ಮೂಲಕ ಅವರಿಗೆ ವೇದಿಕೆ ಕೊಟ್ಟು ಬೆಳೆಸುವ ಕಾರ್ಯವನ್ನು ಮಾಡುತ್ತಿದ್ದು, ಕಳೆದ ಹತ್ತು ವರ್ಷಗಳಲ್ಲಿ ಸಮಾಜಕ್ಕೆ ಉತ್ತಮ ಸಂದೇಶ ನೀಡುವ, ದೇಶಾಭಿಮಾನ ಜೊತೆಗೆ ದೇಶಭಕ್ತಿ ಸಾರುವ ಮತ್ತು ಭಕ್ತಿ ಗೀತೆಗಳ ಹಲವು ಕಿರುಚಿತ್ರಗಳು, ಆಲ್ಬಮ್ ಹಾಡು ಮತ್ತು ಧ್ವನಿಮುದ್ರಿಕೆಗಳನ್ನು ನಿರ್ಮಾಣ ಮಾಡಿ ದೇಶ ವಿದೇಶಗಳಲ್ಲಿ ಬಿಡುಗಡೆಗೊಳಿಸಿದ ಕೀರ್ತಿ ಜನ್ಮ ಕ್ರಿಯೇಷನ್ ಸಂಸ್ಥೆಗಿದೆ.ಧಾರ್ಮಿಕ ಕ್ಷೇತ್ರದಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ದಾಖಲೆ ಮಾಡಿ ಜಾಗತಿಕ ಹಿಂದೂ ಫೌಂಡೇಶನ್ ನಿಂದ ಪ್ರಶಂಸೆ ಪಡೆದ ಹೆಗ್ಗಳಿಕೆಗೆ ಪಾತ್ರವಾಗಿದೆ. ಭಾರತ್ ಮಾತಾ ಕೀ ಜೈ, ವಂದೇ ಮಾತರಂ, ತ್ರಿವರ್ಣ, ಜೈ ಭಾರತಾಂಬೆ ಹಾಗೂ ಅಷ್ಟ ಕ್ಷೇತ್ರ ಗಾನ ವೈಭವ ಈ ಸಂಸ್ಥೆಯ ನಿರ್ಮಾಣದ ಪ್ರಮುಖವಾದವು ಆಗಿವೆ. ಇದೇ ಸಂಸ್ಥೆಯಿಂದ ಆಗಸ್ಟ್ 15 ರಂದು ನಮಸ್ತೆ ಸಿಂಧೂರ್ ಎಂಬ ದೇಶ ಭಕ್ತಿ ಸಾರುವ ಕಿರುಚಿತ್ರ ಬಿಡುಗಡೆಗೊಳ್ಳಲಿದೆ. ಡಾ|ಹರ್ಷಕುಮಾರ್ ರೈ ಅವರು ಪುತ್ತೂರು ಯುವ ಬಂಟರ ಸಂಘದ ಅಧ್ಯಕ್ಷರಾಗಿ ಹಾಗೂ ಪುತ್ತೂರು ಯುವ ರೋಟರಿ ಸಂಸ್ಥೆಯ ಮುಖಾಂತರ ಸಮಾಜಸೇವೆಯನ್ನು ಮಾಡುತ್ತಾ ಬರುತ್ತಿದ್ದಾರೆ.
