ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ದಶಮಾನೋತ್ಸವ ಸಮಿತಿಯ ಅಧ್ಯಕ್ಷ ಬರೋಡ ಶಶಿಧರ ಶೆಟ್ಟಿಯವರ ಮಿತ್ರ ಶಿವಚಂದ್ರ ಶೆಟ್ಟಿಯವರು ಪಟ್ಲ ದಶಮ ಸಂಭ್ರಮಕ್ಕೆ 25 ಲಕ್ಷ ರೂ. ದೇಣಿಗೆಯನ್ನು ಘೋಷಿಸಿದ್ದಾರೆ. ಯಕ್ಷಗಾನದ ಬಗ್ಗೆ ತುಂಬಾ ಅಭಿರುಚಿ ಹೊಂದಿರುವ ಶಿವಚಂದ್ರ ಶೆಟ್ಟಿಯವರು ಪಟ್ಲ ಫೌಂಡೇಶನ್ ಟ್ರಸ್ಟ್ ನ ಕಾರ್ಯ ವೈಖರಿಯನ್ನು ಮೆಚ್ಚಿ ಬರೋಡ ಶಶಿಧರ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ದೇಣಿಗೆ ನೀಡಿದ್ದಾರೆ.

ದೇಶಾದ್ಯಂತ ಪ್ರಮುಖ ನಗರಗಳಲ್ಲಿ ಉದ್ಯಮವನ್ನು ಹೊಂದಿದ್ದು, ಕೊಡುಗೈ ದಾನಿಯಾಗಿರುವ ‘ಉಡುಪಿ ಟು ಮುಂಬೈ’ ಹೋಟೆಲ್ ಸಿ.ಎಂ.ಡಿ ಶಿವಚಂದ್ರ ಶೆಟ್ಟಿಯವರಿಗೆ ಹಾಗೂ ಅವರ ಕುಟುಂಬಕ್ಕೆ ಪಟ್ಲ ಫೌಂಡೇಶನ್ ಟ್ರಸ್ಟ್ ನ ಗೌರವಾಧ್ಯಕ್ಷರಾದ ಡಾ| ಕನ್ಯಾನ ಸದಾಶಿವ ಶೆಟ್ಟಿ, ಡಾ| ಪ್ರಕಾಶ್ ಶೆಟ್ಟಿ, ಅಧ್ಯಕ್ಷ ಶಶಿಧರ ಶೆಟ್ಟಿ ಬರೋಡ ಮತ್ತು ಪಟ್ಲ ಸತೀಶ್ ಶೆಟ್ಟಿ, ಯಕ್ಷಧ್ರುವ ಪಟ್ಲ ಸಂಭ್ರಮ ದಶಮಾನೋತ್ಸವ ಸಮಿತಿಯ ಪದಾಧಿಕಾರಿಗಳು ಕೃತಜ್ಞತೆ ಸಲ್ಲಿಸಿದ್ದಾರೆ.