ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ, ಕಂಪ್ಯೂಟರ್ ತರಬೇತಿ ,ಅಕೌಂಟೆನ್ಸಿ ಇತ್ಯಾದಿ ವಿವಿಧ ಹಂತಗಳಲ್ಲಿ ತರಬೇತಿ ಮುಗಿಸಿದ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ತರಬೇತಿ ಸಂಸ್ಥೆಯಾದ ವಿದ್ಯಾಮಾತಾ ಅಕಾಡೆಮಿಯಲ್ಲಿ ಬೀಳ್ಕೊಡುಗೆ ಸಮಾರಂಭ ನಡೆಯಿತು. ವಿಶೇಷ ಆಹ್ವಾನಿತರಾಗಿ ಆಗಮಿಸಿದ್ದ ಪುಣಚ ಶ್ರೀ ಮಹಿಷ ಮರ್ದಿನಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಮಾರಪ್ಪ ಶೆಟ್ಟಿ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ದೀಪ ಬೆಳಗಿಸಿ ನೆರವೇರಿಸಿದರು ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ, ತರಬೇತಿ ಮುಗಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಿದರು. ಈ ಸಂದರ್ಭದಲ್ಲಿ ಕರಾವಳಿ ಭಾಗದಲ್ಲಿ ವಿಶಿಷ್ಟ ತರಬೇತಿಗಳ ಮೂಲಕ ವಿದ್ಯಾರ್ಥಿಗಳಲ್ಲಿ ಉದ್ಯೋಗ ಕೌಶಲ್ಯತೆ ಗಳನ್ನು ಹೆಚ್ಚಿಸುವ ವಿವಿಧ ಯೋಜನೆಗಳ ಮೂಲಕ ವಿದ್ಯಾಮಾತಾ ಅಕಾಡೆಮಿಯು ಫಲಿತಾಂಶವನ್ನು ಪಡೆಯುತ್ತಿರುವುದಲ್ಲದೆ ಸಾವಿರಾರು ವಿದ್ಯಾರ್ಥಿಗಳಿಗೆ ಖಾಸಗಿ ಮತ್ತು ಸರಕಾರಿ ಕ್ಷೇತ್ರಗಳಲ್ಲಿ ಉದ್ಯೋಗವನ್ನು ಪಡೆಯಲು ದಾರಿದೀಪವಾಗಿರುವುದನ್ನು ಮುಕ್ತವಾಗಿ ಶ್ಲಾಘಿಸಿ ಸಂಸ್ಥೆಗೆ ಶುಭ ಹಾರೈಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ವಿದ್ಯಾಮಾತಾ ಅಕಾಡೆಮಿಯ ಆಡಳಿತ ನಿರ್ದೇಶಕರಾದ ಭಾಗ್ಯೇಶ್ ರೈ ಅವರು ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿ, ಅತಿಥಿಯಾಗಿ ಆಗಮಿಸಿದ್ದ ಶ್ರೀ ಮಾರಪ್ಪ ಶೆಟ್ಟಿಯವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಿದರು. ಕಾರ್ಯಕ್ರಮದಲ್ಲಿ ತರಬೇತಿದಾರರಾದ ಚೇತನ ಸತೀಶ್, ದಿವ್ಯ, ರಮ್ಯಾ, ಸ್ನೇಹ, ಸ್ವಾತಿ, ಪ್ರತಿಕ್ಷಾ ವಿದ್ಯಾರ್ಥಿ ನಾಯಕರಾದ ಶ್ರಾವ್ಯ ಮತ್ತು ದೃತಿ ರೈ ಹಾಗೂ ವಿದ್ಯಾರ್ಥಿಗಳು ಪೋಷಕರು ಉಪಸ್ಥಿತರಿದ್ದರು
