ಭಾರಿ ಜಿದ್ದಾಜಿದ್ದಿನಿಂದ ಕೂಡಿದ್ದ ಅಲಂಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಮೇ 23 ರಂದು ಚುನಾವಣೆ ನಡೆಯಿತು. ಅಧ್ಯಕ್ಷರಾಗಿ ರಮೇಶ್ ಭಟ್ ಉಪ್ಪಂಗಳ ಮತ್ತು ಉಪಾಧ್ಯಕ್ಷರಾಗಿ ದಯಾನಂದ ರೈ ಮನವಳಿಕೆ ಆಯ್ಕೆಯಾದರು.ದಯಾನಂದ ರೈ ಮನವಳಿಕೆಯವರು ಅಲಂಕಾರು ಸೇವಾ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಾಣಾಧಿಕಾರಿಯಾಗಿ ನಿವೃತ್ತರಾಗಿದ್ದರು. ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಯ ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಅವರು ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು.
