ಮೇ 27 ರಂದು ಬೆಳಿಗ್ಗೆ ಮುಂಬಯಿಯ ಕಮಲ ವಿಹಾರ್ ಸ್ಪೋರ್ಟ್ಸ್ ಕ್ಲಬ್ ಕಾಂದಿವಲಿ ಇಲ್ಲಿ ಬಂಟರ ಸಂಘ ಮುಂಬಯಿಯ ಜೋಗೇಶ್ವರಿ – ದಹಿಸರ್ ಪ್ರಾದೇಶಿಕ ಸಮಿತಿಯ ವಿಶೇಷ ಸಭೆಯಲ್ಲಿ ಎರ್ಮಾಳ್ ಹರೀಶ್ ಶೆಟ್ಟಿ, ಮುಂಡಪ್ಪ ಪಯ್ಯಡೆ, ರವೀಂದ್ರ ಸಾಧು ಶೆಟ್ಟಿ, ಪ್ರೇಮನಾಥ್ ಶೆಟ್ಟಿಯವರ ಉಪಸ್ಥಿತಿಯಲ್ಲಿ ಪಟ್ಲ ಫೌಂಡೇಶನ್ ನ ದಶಮನೋತ್ಸವ ಸಂಭ್ರಮದ ಆಮಂತ್ರಣ ಪತ್ರಿಕೆಯನ್ನು ಟ್ರಸ್ಟಿನ ಅಧ್ಯಕ್ಷರಾದ ಪಟ್ಲ ಸತೀಶ್ ಶೆಟ್ಟಿಯವರು ಹಾಗೂ ಪದಾಧಿಕಾರಿಗಳು ನೀಡಿ ಕಾರ್ಯಕ್ರಮಕ್ಕೆ ಆಹ್ವಾನಿಸಿದರು.

ಈ ಸಂಧರ್ಭದಲ್ಲಿ ಮೋಹನ್ ರೈ, ಅಶೋಕ್ ಶೆಟ್ಟಿ ಪೆರ್ಮುದೆ, ಪ್ರಾದೇಶಿಕ ಸಮಿತಿಯ ಸದಸ್ಯರು ಹಾಗೂ ಮಹಿಳಾ ಸದಸ್ಯರು ಉಪಸ್ಥಿತರಿದ್ದರು.