ಬೆಂಗಳೂರಿನ ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯು ತನ್ನ 50ನೇ ವರ್ಷಾಚರಣೆ ಸಂದರ್ಭದಲ್ಲಿ ನಾಡು, ಹೊರನಾಡು ಮತ್ತು ವಿದೇಶಗಳಲ್ಲಿರುವ ವಿವಿಧ ಕ್ಷೇತ್ರಗಳ 74 ಮಂದಿ ಸಾಧಕರನ್ನು ಗುರುತಿಸಿ ಈ ಬಾರಿಯ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಯನ್ನು ನೀಡಿದೆ. ಮೇ 22ರಂದು ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಜರಗಿದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಮೋದ್ ಕುಮಾರ್ ರೈ ಅವರಿಗೆ ಆರ್ಯಭಟ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಕಳೆದ ಮೂರು ದಶಕಗಳಿಂದ ನೃತ್ಯ ಕಲಾವಿದರಾಗಿ, ನಿರ್ದೇಶಕರಾಗಿ, ವಸ್ತ್ರವಿನ್ಯಾಸ ಸೇರಿದಂತೆ ವಿವಿಧ ಆಯಾಮಗಳಲ್ಲಿ ನಿರಂತರವಾಗಿ ರಂಗಸೇವೆ ಸಲ್ಲಿಸುತ್ತಾ ಬಂದಿರುವ ಪ್ರಮೋದ್ ಕುಮಾರ್ ರೈ ಅವರು ಹಲವಾರು ಜಿಲ್ಲಾ ಹಾಗೂ ರಾಜ್ಯ ಪ್ರಶಸ್ತಿಗಳನ್ನು ಪಡೆದಿದ್ದು, ಬೆಳ್ಳಾರೆಯಲ್ಲಿ ‘ಕಲಾಮಂದಿರ್’ ಸಂಸ್ಥೆಯಲ್ಲಿ ನಿರ್ದೇಶಕರಾಗಿದ್ದಾರೆ.