ಎಸ್.ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್ ನಡಿ ತಯಾರಾದ ಬಹು ನಿರೀಕ್ಷಿತ ‘ಪಿಲಿಪಂಜ’ ತುಳು ಸಿನೆಮಾದ ಟೀಸರನ್ನು ನಟ, ನಿರ್ದೇಶಕ ಡಾ|ದೇವದಾಸ್ ಕಾಪಿಕಾಡ್ ಬಿಡುಗಡೆಗೊಳಿಸಿದರು. ಟೀಸರನ್ನು ವೀಕ್ಷಿಸಿದ ದೇವದಾಸ್ ಕಾಪಿಕಾಡ್ ಅವರು ತುಳುವಿನಲ್ಲಿ ಮತ್ತೊಂದು ಸದಭಿರುಚಿಯ ಸಿನೆಮಾವನ್ನು ಪಿಲಿಪಂಜದ ಮೂಲಕ ನೋಡಲು ಸಾಧ್ಯವಿದೆ. ಟೀಸರ್ ನಮ್ಮನ್ನು ಇನ್ನಷ್ಟು ಕುತೂಹಲ ಮೂಡಿಸುವಂತೆ ಮಾಡಿದೆ. ಸಿನೆಮಾ ಯಶಸ್ವಿಯಾಗುವುದರಲ್ಲಿ ಎರಡು ಮಾತಿಲ್ಲ ಎಂದು ಅವರು ಸಿನಿಮಾ ತಂಡಕ್ಕೆ ಶುಭ ಹಾರೈಸಿದರು.

ತುಳು ಕಲಾಭಿಮಾನಿಗಳು ಈ ಸಿನೆಮಾವನ್ನು ನೋಡಿ ಚಿತ್ರ ತಂಡವನ್ನು ಬೆಂಬಲಿಸಬೇಕೆಂದು ಚಿತ್ರತಂಡ ವಿನಂತಿಸಿದೆ. ನಿರ್ಮಾಪಕ ಪ್ರತೀಕ್ ಯು. ಪೂಜಾರಿ ಕಾವೂರು, ನಿರ್ದೇಶಕ ಭರತ್ ಶೆಟ್ಟಿ, ಕಾರ್ಯಕಾರಿ ನಿರ್ಮಾಪಕ ಹಾಗೂ ಕಲಾವಿದ ರಮೇಶ್ ರೈ ಕುಕ್ಕುವಳ್ಳಿ ಈ ಸಂಧರ್ಭ ಉಪಸ್ಥಿತರಿದ್ದರು.