ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಸಂಚಾಲಕರಾದ ಸಹಕಾರ ರತ್ನ ಸವಣೂರು ಕೆ ಸೀತಾರಾಮ ರೈಯವರ 78 ನೇಯ ಹುಟ್ಟು ಹಬ್ಬ ಆಚರಣೆ ಮತ್ತು ವಿದ್ಯಾರಶ್ಮಿ ವಿದ್ಯಾಲಯದ ಪ್ರಾರಂಭೋತ್ಸವವು ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಬೆಳಗ್ಗೆ 9.30 ರಿಂದ ಸವಣೂರು ವಿದ್ಯಾರಶ್ಮಿ ವಿದ್ಯಾಲಯದ 2025- 26 ರ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಕಾರ್ಯಕ್ರಮ ನಡೆಯಲಿದ್ದು, ಸಂಸ್ಥೆಯ ಸಂಚಾಲಕರಾದ ಸವಣೂರು ಕೆ ಸೀತಾರಾಮ ರೈ ಅವರ 78ನೇ ಹುಟ್ಟುಹಬ್ಬವನ್ನು ಮಕ್ಕಳೊಂದಿಗೆ ಆಚರಿಸಿಕೊಳ್ಳಲಿದ್ದಾರೆ. ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಮೆರವಣಿಗೆ, ವನಮಹೋತ್ಸವಆಚರಣೆ, ದ್ವಿತೀಯ ಮತ್ತು ಎಸ್.ಎಸ್.ಎಲ್.ಸಿಯಲ್ಲಿ ಡಿಸ್ಟಿಂಕ್ಷನ್ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಲಾಗುವುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.