ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿ ಲಿಮಿಟೆಡ್ ಇದರ 28 ನೇ ಹಿರಿಯಡ್ಕ ಶಾಖೆಯನ್ನು ಜೂನ್ 09 ರಂದು ಎಸ್.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ ಎನ್ ರಾಜೇಂದ್ರ ಕುಮಾರ್ ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಗಣ್ಯರಾದ ಕಾಪು ಕ್ಷೇತ್ರದ ಮಾಜಿ ಶಾಸಕ ವಿನಯಕುಮಾರ್ ಸೊರಕೆ, ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ ಜೈರಾಜ್ ಬಿ ರೈ, ಲಾವಣ್ಯ ಕೆ ಆರ್, ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ, ಪೆರ್ಡೂರು ಬಂಟರ ಸಂಘದ ಅಧ್ಯಕ್ಷ ಶಾಂತರಾಮ್ ಸೂಡ, ರವೀಂದ್ರ ಪೂಜಾರಿ, ಕೆ ರಾಜಾರಾಮ್ ಹೆಗ್ಡೆ, ರವೀಂದ್ರನಾಥ ಜಿ ಹೆಗ್ಡೆ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
