ಯಕ್ಷಧ್ರುವ ಪಟ್ಲ ಫೌಂಡೇಶನ್ ಬಂಟ್ವಾಳ ಘಟಕ ಇದರ ಪದಾಧಿಕಾರಿಗಳ ಸಭೆಯು ಅಧ್ಯಕ್ಷರಾದ ಚಂದ್ರಹಾಸ ಡಿ ಶೆಟ್ಟಿ ರಂಗೋಲಿ ಇವರ ಅಧ್ಯಕ್ಷತೆಯಲ್ಲಿ ಬಿ.ಸಿ ರೋಡಿನ ಹೋಟೆಲ್ ರಂಗೋಲಿಯಲ್ಲಿ ಜರಗಿತು. ಮುಂದಿನ ಅವಧಿಗೆ ನೂತನ ಸಮಿತಿಯನ್ನು ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಜಗನ್ನಾಥ ಚೌಟ ಬದಿಗುಡ್ಡೆ, ಅಧ್ಯಕ್ಷರಾಗಿ ದಿವಾಕರ ಶೆಟ್ಟಿ ಪರಾರಿಗುತ್ತು, ಪ್ರಧಾನ ಕಾರ್ಯದರ್ಶಿಯಾಗಿ ಬಿ ದೇವದಾಸ ಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು.

ಸಭೆಯಲ್ಲಿ ಜಗನ್ನಾಥ ಚೌಟ ಬದಿಗುಡ್ಡೆ, ಸದಾನಂದ ಶೆಟ್ಟಿ ರಂಗೋಲಿ, ಸಂಕಪ್ಪ ಶೆಟ್ಟಿ ಸಂಚಯಗಿರಿ, ಸೇಸಪ್ಪ ಮಾಸ್ಟರ್, ಸಂಜೀವ ಶೆಟ್ಟಿ ಬೋಳಂತೂರು, ಚಿತ್ತರಂಜನ್ ಶೆಟ್ಟಿ ಬೊಂಡಾಲ, ಜಯಪ್ರಕಾಶ್ ಜಕ್ರಿಬೆಟ್ಟು, ದೇವದಾಸ್ ಶೆಟ್ಟಿ, ಮೋಹನ್ ದಾಸ್ ಕೊಟ್ಟಾರಿ, ಶಂಕರ ಶೆಟ್ಟಿ ಪರಾರಿಗುತ್ತು, ದಿವಾಕರ ಶೆಟ್ಟಿ ಪರಾರಿಗುತ್ತು, ಸತೀಶ್ ಶೆಟ್ಟಿ ಮೊಡಂಕಾಪು ಉಪಸ್ಥಿತರಿದ್ದರು.