ಭಾರತೀಯ ಜನತಾ ಪಕ್ಷದ ಸಂಘಟನಾ ಪರ್ವ ದೇಶದಾದ್ಯಂತ ನಡೆಯುತ್ತಿದ್ದು, ಇದರ ಮುಂದುವರೆದ ಭಾಗವಾಗಿ ಕರ್ನಾಟಕ ಬಿಜೆಪಿಯು 10 ಜಿಲ್ಲೆಗಳಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿದೆ. ಈ ಕುರಿತು ಅಧಿಕೃತ ಪ್ರಕಟಣೆಯನ್ನು ಚುನಾವಣಾಧಿಕಾರಿ ಕ್ಯಾ. ಗಣೇಶ್ ಕಾರ್ಣಿಕ್ ಅವರು ಹೊರಡಿಸಿದ್ದು ಅದರಂತೆ ಉಡುಪಿ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಕುತ್ಯಾರು ನವೀನ್ ಶೆಟ್ಟಿ ಅವರನ್ನು ನೇಮಕ ಮಾಡಲಾಗಿದೆ.
ದೇಶದಾದ್ಯಂತ ಪಕ್ಷದ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಎರಡನೇ ಹಂತದಲ್ಲಿ ಉಳಿದಿರುವ 10 ಸಂಘಟನಾತ್ಮಕ ಜಿಲ್ಲಾ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದೆ. ಆಯ್ಕೆಯಾದ ಹತ್ತು ನೂತನ ಅಧ್ಯಕ್ಷರಿಗೆ ಚುನಾವಣಾಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಅಭಿನಂದನೆ ಸಲ್ಲಿಸಿದ್ದಾರೆ.
