ಬಂಟರ ಯಾನೆ ನಾಡವರ ಸಂಘ (ರಿ.) ಬೈಂದೂರು ವತಿಯಿಂದ 2025-26ನೇ ವರ್ಷದ ‘ಪ್ರತಿಭಾ ಪುರಸ್ಕಾರ’ ಯೋಜನೆಗೆ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಬೈಂದೂರು ವಲಯದ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ 90 ಕ್ಕಿಂತ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳು ಸಿ.ಬಿ.ಎಸ್.ಸಿ. ಅಥವಾ ಐಸಿಎಸ್ಸಿ ಮಂಡಳಿ ಪರೀಕ್ಷೆಯಲ್ಲಿ ಶೇಕಡ 90 ಅಂಕ ಗಳಿಸಿದ ಬಂಟ ಸಮುದಾಯದ ವಿದ್ಯಾರ್ಥಿಗಳೂ ಸಹ ಅರ್ಜಿ ಸಲ್ಲಿಸಬಹುದು. ಪ್ರಥಮ ವರ್ಷದ ಪದವಿ ಪೂರ್ವ, ಪದವಿ ಅಥವಾ ವೃತ್ತಿಪರ ಶಿಕ್ಷಣ ಪಡೆದಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

www.bansbyndoor.com ಜಾಲ ತಾಣದಲ್ಲಿ prathiba puraskara-2025 ಲಿಂಕ್ Olympics ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಎನ್. ವಸಂತ ಹೆಗ್ಡೆ (ಸಂಚಾಲಕರು) 6361121382, 9481300846 ಇವರನ್ನು ಸಂಪರ್ಕಿಸಬಹುದು ಎಂದು ಅಧ್ಯಕ್ಷ ಸಾಲ್ಗದ್ದೆ ಶಶಿಧರ ಶೆಟ್ಟಿ ತಿಳಿಸಿದ್ದಾರೆ.