ಉಡುಪಿ ಎಂಜಿಎಂ ಪದವಿಪೂರ್ವ ಕಾಲೇಜಿನ ರೊನಾಕ್ ಆರ್ ಶೆಟ್ಟಿಯವರು 2025 ರ ರಾಷ್ಟ್ರ ಮಟ್ಟದ ನೀಟ್ ಪರೀಕ್ಷೆಯಲ್ಲಿ 646/720 ಗಳಿಸುವುದರೊಂದಿಗೆ ರಾಷ್ಟ್ರ ಮಟ್ಟದಲ್ಲಿ 107 ನೇ ಸ್ಥಾನ, ರಾಜ್ಯ ಮಟ್ಟದಲ್ಲಿ 8ನೇ ಸ್ಥಾನ, ಅವಿಭಜಿತ ದ.ಕ ಜಿಲ್ಲಾ ಮಟ್ಟದಲ್ಲಿ 3ನೇ ಸ್ಥಾನ, ಉಡುಪಿ ಜಿಲ್ಲೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರ ಮಟ್ಟದ ವೈದ್ಯಕೀಯ ಪ್ರವೇಶಾತಿ ಪರೀಕ್ಷೆಯಲ್ಲಿ ಉತ್ಕೃಷ್ಟ ಸಾಧನೆಗೈದಿದ್ದಾರೆ.

ಉಡುಪಿ ಜಿಲ್ಲೆಯ ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಡಾ| ರೇೂಷನ್ ಕುಮಾರ್ ಶೆಟ್ಟಿ ಹಾಗೂ ಉಡುಪಿ ಎಂಜಿಎಂ ಕಾಲೇಜಿನ ಜೀವ ಶಾಸ್ತ್ರ ವಿಭಾಗದ ಉಪನ್ಯಾಸಕಿ ಅನಿತಾ ಆರ್ ಶೆಟ್ಟಿಯವರ ಸುಪುತ್ರ ರೊನಾಕ್ ಆರ್ ಶೆಟ್ಟಿಯವರ ಸಾಧನೆಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ಮತ್ತು ಶಿಕ್ಷಕೇತರ ವರ್ಗದವರು ಶ್ಲಾಘಿಸಿದ್ದಾರೆ.





































































































