ಪುಣೆ ಬಂಟರ ಸಂಘದ ಟ್ರಸ್ಟಿ, ಸಮಾಜಸೇವಕ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ, ಪುಣೆ ಗುರುದೇವಾ ಸೇವಾ ಬಳಗದ ಅಧ್ಯಕ್ಷ, ತಮನ್ನಾ ಗ್ರೂಪ್ ಆಫ್ ಹೊಟೇಲ್ಸ್ ನ ಆಡಳಿತ ನಿರ್ದೇಶಕ ಪ್ರಭಾಕರ್ ವಿ ಶೆಟ್ಟಿ ಇವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಪೋಷಕ ಸದಸ್ಯರಾಗಿ ಸೇರ್ಪಡೆಗೊಂಡಿದ್ದಾರೆ.

2024 ರ ಸಾಲಿನ ಬಂಟ ವಿಭೂಷಣ ಪ್ರಶಸ್ತಿ ಸೇರಿದಂತೆ ಹಲವಾರು ಪ್ರಶಸ್ತಿ ಪುರಸ್ಕಾರಕ್ಕೆ ಭಾಜನರಾಗಿರುವ ಇವರಿಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನ ದಯೆ ಇವರ ಮತ್ತು ಇವರ ಕುಟುಂಬದ ಮೇಲೆ ಸದಾ ಇರಲಿ ಎಂದು ಹಾರೈಸಿ, ಒಕ್ಕೂಟದ ಪರವಾಗಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.