ಜೂನ್ 21 ರಂದು ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆಯುಷ್ ಇಲಾಖೆ ಅವರ ಆಶ್ರಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ 2025 ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮಾನ್ಯ ಕೆಪಿಸಿಸಿ ಕಾರ್ಯಧ್ಯಕ್ಷರು ಹಾಗೂ ಶಾಸಕರಾದ ಮಂಜುನಾಥ ಭಂಡಾರಿಯವರು ಭಾಗವಹಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾದ ದರ್ಶನ್ ಎಚ್ ವಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಆನಂದ ಕೆ ಸೇರಿದಂತೆ ಅನೇಕ ಮುಖ್ಯ ಗಣ್ಯರು ಉಪಸ್ಥಿತರಿದ್ದರು.