ಲಯನ್ಸ್ ಕ್ಲಬ್ ಕುಂದಾಪುರ ಕೋಸ್ಟಲ್ ನ 2025-26 ನನೇಯ ಸಾಲಿನ ನೂತನ ಅಧ್ಯಕ್ಷರಾಗಿ ಕುಂದಾಪುರ ತಾಲೂಕು ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷರು ಹಾಗೂ ದಶಮಾನೋತ್ಸವದ ಅಧ್ಯಕ್ಷರಾಗಿ ಇಡೀ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಮಿಂಚನ್ನು ಮೂಡಿಸಿದ ಅತ್ಯಂತ ಕ್ರಿಯಾಶೀಲರೂ ಸಮಾಜ ಪರ ಕಳಕಳಿಯ ಅಪ್ರತಿಮ ಯುವ ಸಂಘಟಕ, ಕರ್ನಾಟಕ ಜಾನಪದ ಪರಿಷತ್ತು (ರಿ.) ಬೆಂಗಳೂರು ಇದರ ನಿಕಟ ಪೂರ್ವ ಜಿಲ್ಲಾಧ್ಯಕ್ಷರು, ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಂಗಳೂರು ಇದರ ಕುಂದಾಪುರ ಶಾಖೆಯ ಸಲಹಾ ಸಮಿತಿಯ ಸದಸ್ಯರು, ಮಿಲಾಗ್ರಿಸ್ ಕಾಲೇಜು ಕಲ್ಯಾಣಪುರದ ಸಹಾಯಕ ಪ್ರಾಧ್ಯಾಪಕರು ಆದ ಲಯನ್ ಡಾ| ಅಂಪಾರು ನಿತ್ಯಾನಂದ ಶೆಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪ್ರಧಾನ ಕಾರ್ಯದರ್ಶಿಯಾಗಿ ಅರ್ಥಶಾಸ್ತ್ರ ಉಪನ್ಯಾಸಕರಾಗಿ ಸುಧೀರ್ಘ ಕಾಲ ಸೇವೆ ಸಲ್ಲಿಸಿ, ಸರ್ಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರದಲ್ಲಿ ಪ್ರಾಂಶುಪಾಲರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಲಯನ್ ಭುಜಂಗ ಶೆಟ್ಟಿ ರಟ್ಟಾಡಿ ಹಾಗೂ ಕೋಶಾಧಿಕಾರಿಯಾಗಿ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉಡುಪಿ ಶಾಖೆಯ ಶಾಖಾಧಿಕಾರಿಗಳಾದ ಲಯನ್ ಅಣ್ಣಪ್ಪ ಶೆಟ್ಟಿ ಯರುಕೋಣೆ ಆಯ್ಕೆಯಾಗಿರುತ್ತಾರೆಂದು ಲಯನ್ ಕ್ಲಬ್ ಕುಂದಾಪುರ ಕೋಸ್ಟಲ್ ನ ಸ್ಥಾಪಕ ಅಧ್ಯಕ್ಷರಾದ ಲಯನ್ ಅಶೋಕ್ ಶೆಟ್ಟಿ ಸಂಸಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
















































































































