ಬ್ರಹ್ಮಾವರ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಯೋಗ ಶಿಕ್ಷಕಿ ಪ್ರಿಯಾಂಕ ದೀಕ್ಷಿತ್ರವರು ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಅವರು ಮಾತನಾಡಿ ಯೋಗಾಸನವು ನಮ್ಮ ದೈಹಿಕ ಹಾಗೂ ಮಾನಸಿಕ ಸ್ಥಿತಿಯನ್ನು ನಿಯಂತ್ರಿಸುವ ಉತ್ತಮ ಮಾರ್ಗವಾಗಿದೆ. ಯೋಗಾಭ್ಯಾಸವು ಕೇವಲ ಆಚರಣೆಯ ಸಲುವಾಗಿ ಅದು ಒಂದು ದಿನಕ್ಕೆ ಸೀಮಿತವಾಗಿರದೇ ಪ್ರಿತಿನಿತ್ಯ ಯೋಗಾಸನವನ್ನು ಮಾಡಿ ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ ಎಂದರು.

ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ವಿದ್ಯಾರ್ಥಿಗಳಿಂದ ಯೋಗಾಭ್ಯಾಸದ ಪ್ರತಿಜ್ಞೆಯನ್ನು ಸ್ವೀಕರಿಸಿ ಮಾತನಾಡಿ ಯೋಗದ ಇತಿಹಾಸ, ಆಚರಣೆಯ ಮಹತ್ವವನ್ನು ತಿಳಿಸಿ ಉತ್ತಮ ಅರೋಗ್ಯಕ್ಕೆ, ನೆಮ್ಮದಿಗೆ ಯೋಗ ಅನಿವಾರ್ಯವೆಂದರು. ಸಂಸ್ಥೆಯ ಸಾವಿರಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಅತಿಥಿಗಳ ನಿರ್ದೇಶನದಲ್ಲಿ ಯೋಗಾಸನಗಳನ್ನು ಮಾಡಿದರು. ಕಾರ್ಯಕ್ರಮದಲ್ಲಿ ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷೆ ಡಾ. ಅನುಷಾ ಸುಬ್ರಹ್ಮಣ್ಯಂ, ಶಾಲಾ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.