ಸುರತ್ಕಲ್ ಬಂಟರ ಸಂಘದ ಮಹಿಳಾ ವೇದಿಕೆಯ ಸಭೆ ಸುರತ್ಕಲ್ ಬಂಟರ ಭವನದಲ್ಲಿ ನಡೆದಿದ್ದು, 2025-27 ರ ಸಾಲಿಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಅಧ್ಯಕ್ಷೆಯಾಗಿ ಸರೋಜಾ ಟಿ ಶೆಟ್ಟಿ, ಪ್ರಧಾನ ಕಾರ್ಯದರ್ಶಿಯಾಗಿ ರಾಜೇಶ್ವರಿ ಡಿ ಶೆಟ್ಟಿ ಆಯ್ಕೆಯಾದರು.

ಉಪಾಧ್ಯಕ್ಷರಾಗಿ ಜಯಂತಿ ಪಿ ಟಿ ರೈ, ಕೋಶಾಧಿಕಾರಿಯಾಗಿ ಮಾಲತಿ ಜೆ ಶೆಟ್ಟಿ, ಜೊತೆ ಕಾರ್ಯದರ್ಶಿಯಾಗಿ ಕವಿತಾ ಪಿ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಆಶಾ ಕಿರಣ್ ರೈ, ಕ್ರೀಡಾ ಕಾರ್ಯದರ್ಶಿಯಾಗಿ ಬಬಿತ ಜೆ ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ದೀಪಾ ಕೆ ಶೆಟ್ಟಿ ಆಯ್ಕೆಯಾಗಿದ್ದಾರೆ.