
ಮುಂಬಯಿಯ ಖ್ಯಾತ ಉದ್ಯಮಿಗಳಾದ ಸುಧಾಕರ್ ಶೆಟ್ಟಿ ಹಾಗೂ ಸಂತೋಷ್ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ನಿರ್ದೇಶಕರಾಗಿ ಸೇರ್ಪಡೆಗೊಂಡಿದ್ದಾರೆ.

ಸೊಲ್ಯೂಷನ್ 1 ಇಂಟಿರಿಯರ್ಸ್ ಇಂಡಿಯ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಆಡಳಿತ ಪಾಲುದಾರರಾಗಿರುವ ಇವರು ಈ ಹಿಂದೆ ಪೋಷಕ ಸದಸ್ಯರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಇನ್ನು ಮುಂದೆ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನ ದಯೆ ಇವರ ಮತ್ತು ಇವರ ಕುಟುಂಬದ ಮೇಲೆ ಸದಾ ಇರಲಿ ಎಂದು ಹಾರೈಸಿ, ಒಕ್ಕೂಟದ ಪರವಾಗಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.





















































































































