ಬ್ರಹ್ಮಾವರ: ಇಲ್ಲಿನ ಜಿ ಎಮ್ ವಿದ್ಯಾನಿಕೇತನ್ ಪಬ್ಲಿಕ್ ಸ್ಕೂಲ್ನಲ್ಲಿ ಫ್ರೆಶರ್ಸ್ ಡೇ ಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಉಡುಪಿ ಅಂಬಲಪಾಡಿಯ ಖ್ಯಾತ ವೈದ್ಯೆ ಡಾ. ರೂಪಶ್ರೀಯವರು ಆಗಮಿಸಿದ್ದರು. ಅವರು ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಕಲಿಕೆಯಷ್ಟೇ ಪಠ್ಯೇತರ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕು. ಪ್ರತಿನಿತ್ಯ ವ್ಯಾಯಾಮ ಮಾಡುವುದರ ಮೂಲಕ ತಮ್ಮ ಆರೋಗ್ಯವನ್ನು ಹಾಗೂ ಮನಸ್ಸಿನ ಶಾಂತಿಯನ್ನು ಕಾಪಾಡಿಕೊಳ್ಳಬೇಕೆಂದರು. ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಪ್ರಕಾಶ್ಚಂದ್ರ ಶೆಟ್ಟಿ ಹೊಸ ಶೈಕ್ಷಣಿಕ ವರ್ಷಕ್ಕೆ ಮಕ್ಕಳಿಗೆ ಶುಭ ಹಾರೈಸಿ ಮಾತನಾಡಿ ಮುಂಜಾನೆ ಬೇಗನೆ ಎದ್ದು ನಮ್ಮ ದಿನಚರಿಗಳನ್ನು ಪ್ರಾರಂಭಿಸಬೇಕು. ಸಮಯವನ್ನು ವ್ಯರ್ಥ ಮಾಡದೆ ಒಂದಲ್ಲಾ ಒಂದು ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕೆಂದರು.

ಶಾಲಾ ಪ್ರಾಂಶುಪಾಲರಾದ ಜಾರ್ಜ್ ಕುರಿಯನ್ ಸಂಸ್ಥೆಗೆ ಹೊಸದಾಗಿ ಸೇರಿಕೊಂಡ ಶಿಕ್ಷಕರನ್ನು, ವಿದ್ಯಾರ್ಥಿಗಳನ್ನು ಸ್ವಾಗತಿಸಿ ಶುಭಕೋರಿದರು. ಶಿಕ್ಷಕವೃಂದ, ವಿದ್ಯಾರ್ಥಿಗಳು ತಮ್ಮ ಪ್ರತಿಭಾ ಪ್ರದರ್ಶನ ಮಾಡಿದರು. ಕಾರ್ಯಕ್ರಮದಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯೆ ತಾರಾ ಪ್ರಕಾಶ್ಚಂದ್ರ ಶೆಟ್ಟಿ ಜಿ ಎಮ್ ಗ್ಲೋಬಲ್ ಸ್ಕೂಲ್ನ ಪ್ರಾಂಶುಪಾಲರಾದ ಪ್ರಣವ್ ಶೆಟ್ಟಿ, ಶ್ರೀಮಾ ಪ್ರಣವ್ ಶೆಟ್ಟಿ, ಶಿಕ್ಷಕ ರಕ್ಷಕ ಸಂಘದ ಉಪಾಧ್ಯಕ್ಷೆ ರೇವತಿ ಕೆ, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.





































































































