ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ.) ಮಂಗಳೂರು ಇದರ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ 2025- 26 ನೇ ಸಾಲಿನ ಯಕ್ಷಗಾನ ತರಗತಿಯು ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಮ್ಮಾಜೆ ಇಲ್ಲಿ ರವಿವಾರ ಆರಂಭಗೊಂಡಿತು. ತರಗತಿಯನ್ನು ಪಟ್ಲ ಫೌಂಡೇಶನ್ ಎಕ್ಕಾರ್ ಘಟಕದ ಗೌರವಾಧ್ಯಕ್ಷರಾದ ರತ್ನಾಕರ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿ ಶುಭ ಹಾರೈಸಿದರು. ಪ್ರಾಂಶುಪಾಲರಾದ ಡಾ. ಪುಟ್ಟಸ್ವಾಮಿ ಸಭೆಯನ್ನುದ್ದೇಶಿಸಿ ಅಧ್ಯಕ್ಷೀಯ ನುಡಿಗಳನ್ನಾಡಿದರು.

ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ಸಂಯೋಜಕ ದೀವಿತ್ ಎಸ್ ಕೆ ಪೆರಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ಯಕ್ಷಧ್ರುವ ಯಕ್ಷಶಿಕ್ಷಣ ಯೋಜನೆಯ ಪ್ರಧಾನ ಸಂಚಾಲಕ ಪಣಂಬೂರು ವಾಸುದೇವ ಐತಾಳ್, ಎಕ್ಕಾರು ಘಟಕದ ಕಾರ್ಯದರ್ಶಿ ಸತೀಶ್ ಶೆಟ್ಟಿ, ಯಕ್ಷಗಾನ ಶಿಕ್ಷಕರಾದ ವರುಣ್ ಆಚಾರ್ಯ, ಸಂಸ್ಥೆಯ ಅಧ್ಯಾಪಕ ವೃಂದ, ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಅಧ್ಯಕ್ಷರಾದ ಜಕೀಯ ಬತೂಲ್ ಯಕ್ಷಗಾನದ ಬಗ್ಗೆ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಅಧ್ಯಾಪಕ ಭೀಮಶಂಕರ ಸ್ವಾಗತಿಸಿದರು. ಅಧ್ಯಾಪಕ ಸಂಗಮೇಶ್ ವಂದಿಸಿದರು. ಉಪನ್ಯಾಸಕ ಮಹೇಶ್ ಕಾರ್ಯಕ್ರಮ ನಿರೂಪಿಸಿದರು.