ಕಳೆದ ಮೇ ತಿಂಗಳಿನಲ್ಲಿ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ ಅಂತಿಮ ಬಿಇ ಪರೀಕ್ಷೆಯಲ್ಲಿ ಮೂಡುಬಿದಿರೆಯ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದ ಕೃಷಿ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳು ಹಲವು ರ್ಯಾಂಕ್ಗಳನ್ನು ಪಡೆದು ಸಾಧನೆ ಮೆರೆದಿದ್ದಾರೆ. ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಕೃಷಿ ಇಂಜಿನಿಯರಿಂಗ್ ವಿಭಾಗದ ಪ್ರಥಮ ಬ್ಯಾಚ್ನ ವಿದ್ಯಾರ್ಥಿಗಳಾದ ಸಂತೋಷ ಎಂ ದ್ವಿತೀಯ ರ್ಯಾಂಕ್, ತೇಜಸ್ ತೃತೀಯ ರ್ಯಾಂಕ್, ಮೋನಿಷಾ 8 ನೇ ರ್ಯಾಂಕ್ ಹಾಗೂ ಅದೇ ವಿಭಾಗದ ಕಿರಣ್ ವಿ 9 ನೇ ರ್ಯಾಂಕ್ ಗಳಿಸಿ ಸಾಧನೆ ಮೆರೆದಿದ್ದಾರೆ. ಸಾಧನೆ ಮೆರೆದ ವಿದ್ಯಾರ್ಥಿಗಳನ್ನು ಸಂಸ್ಥೆಯ ಅಧ್ಯಕ್ಷ ಡಾ. ಎಂ ಮೋಹನ ಆಳ್ವ, ಟ್ರಸ್ಟಿ ವಿವೇಕ್ ಆಳ್ವ ಹಾಗೂ ಪ್ರಾಚಾರ್ಯರು ಹಾಗೂ ಶಿಕ್ಷಕ ವೃಂದ ಶ್ಲಾಘಿಸಿದೆ.
