ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಅಭಿನಯ ಮತ್ತು ನಿರ್ದೇಶನದ ಜೈ ತುಳು ಸಿನಿಮಾ ನವಂಬರ್ 14 ರಂದು ರಾಜ್ಯಾದ್ಯಂತ ತೆರೆಕಾಣಲಿದೆ. ಶಿವರಾಜ್ ಕುಮಾರ್ ಅವರು ಬೆಂಗಳೂರಿನಲ್ಲಿ ಬಿಡುಗಡೆಯ ದಿನಾಂಕವನ್ನು ಬಿಡುಗಡೆಗೊಳಿಸಿದರು. “ಜೈ” ಸಿನಿಮಾ ತುಳುವಿನಲ್ಲಿ ಬಿಗ್ ಬಜೆಟ್ ನ ಸಿನಿಮಾ ಆಗಿದ್ದು, ಸಿನಿಮಾಕ್ಕೆ ಮಂಗಳೂರನ್ನು ಕೇಂದ್ರೀಕರಿಸಿ ವಿವಿಧ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಜಿಲ್ಲೆಯ ಖ್ಯಾತನಾಮ ಕಲಾವಿದರು ಸಿನಿಮಾದಲ್ಲಿದ್ದಾರೆ. ಗಿರಿಗಿಟ್, ಗಮ್ಜಾಲ್, ಸರ್ಕಸ್ ಚಿತ್ರಗಳ ಯಶಸ್ಸಿನ ಬಳಿಕ ರೂಪೇಶ್ ಶೆಟ್ಟಿ ಅವರು ಮತ್ತೊಂದು ಬಿಗ್ ಬಜೆಟ್ ನ ಸಿನಿಮಾಕ್ಕೆ ಕೈ ಹಾಕಿದ್ದಾರೆ. ಜೈ ಸಿನಿಮಾ ಆರ್.ಎಸ್ ಸಿನಿಮಾಸ್, ಶೂಲಿನ್ ಫಿಲಂಸ್, ಮುಗ್ರೋಡಿ ಪ್ರೊಡಕ್ಷನ್ ಲಾಂಛನದಲ್ಲಿ ನಿರ್ಮಾಣವಾಗುತ್ತಿದೆ.

ರೂಪೇಶ್ ಶೆಟ್ಟಿ ಸಿನಿಮಾದ ನಿರ್ದೇಶಕರಾಗಿದ್ದು, ಕತೆ ಹಾಗೂ ಸಂಭಾಷಣೆಯನ್ನು ಪ್ರಸನ್ನ ಶೆಟ್ಟಿ ಬೈಲೂರು ಬರೆದಿದ್ದಾರೆ. ಕ್ಯಾಮರಾ ವಿನುತ್ ಕೆ, ಸಂಗೀತ ಲೊಯ್ ವೆಲೆಂಟಿನ್ ಸಲ್ದಾನ, ಸಂಕಲನ ರಾಹುಲ್ ವಸಿಷ್ಠ, ನಿರ್ಮಾಪಕರು ಅನಿಲ್ ಶೆಟ್ಟಿ, ಸುಧಾಕರ ಶೆಟ್ಟಿ ಮುಗ್ರೋಡಿ, ಮಂಜುನಾಥ ಅತ್ತಾವರ, ಸಹ ನಿರ್ಮಾಪಕರು ದೀಕ್ಷಿತ್ ಆಳ್ವ, ನೃತ್ಯ ಹಾಗೂ ಎಕ್ಸಿಕ್ಯೂಟಿವ್ ಪ್ರೊಡ್ಯುಸರ್ ನವೀನ್ ಶೆಟ್ಟಿ ಆರ್ಯನ್ಸ್. “ಜೈ” ಸಿನಿಮಾದಲ್ಲಿ ಸುನೀಲ್ ಶೆಟ್ಟಿ, ಡಾ| ದೇವದಾಸ್ ಕಾಪಿಕಾಡ್, ರಾಜ್ ದೀಪಕ್ ಶೆಟ್ಟಿ, ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಂದೀಪ್ ಶೆಟ್ಟಿ ಮಾಣಿಬೆಟ್ಟು, ಉಮೇಶ್ ಮಿಜಾರ್ ಮೊದಲಾದವರು ಅಭಿನಯಿಸಿದ್ದಾರೆ. ನಾಯಕಿಯಾಗಿ ಅದ್ವಿತಿ ಶೆಟ್ಟಿ ಅಭಿನಯಿಸಿದ್ದಾರೆ. ಸಿನಿಮಾಕ್ಕೆ ಮೂರು ಹಂತಗಳಲ್ಲಿ ಚಿತ್ರೀಕರಣ ನಡೆದಿದೆ.