ಮುಂಬಯಿಯ ಪ್ರಸಿದ್ಧ ಹೊಟೇಲ್ ಉದ್ಯಮಿ, ಸಮಾಜಸೇವಕ, ಬಂಟ್ಸ್ ನೌ ಮಾಧ್ಯಮ ಸಂಸ್ಥೆಯ ಮಹಾಪೋಷಕ ಕರುಣಾಕರ್ ಶೆಟ್ಟಿ ಏಳಿಂಜೆ ಕೊಂಜಾಲು ಇವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಪೋಷಕ ಸದಸ್ಯರಾಗಿ ಸೇರ್ಪಡೆಗೊಂಡಿದ್ದಾರೆ.

ಕಲಿಯುತ್ತಿರುವ ಬಡ ಮಕ್ಕಳಿಗೆ ಸದಾ ನೆರವನ್ನು ನೀಡುತ್ತಿರುವ ಇವರಿಗೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ಅಮ್ಮನ ದಯೆ ಇವರ ಮತ್ತು ಇವರ ಕುಟುಂಬದ ಮೇಲೆ ಸದಾ ಇರಲಿ ಎಂದು ಹಾರೈಸಿ, ಒಕ್ಕೂಟದ ಪರವಾಗಿ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.