ಜುಲೈ 13ನೇ ಆದಿತ್ಯವಾರದಂದು ಬೆಳಿಗ್ಗೆ 10 ಗಂಟೆಗೆ ಬಂಟ್ಸ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ನೂತನ ಶಾಖೆಯು ಬೆಳ್ಮಣ್ ಸೂರಜ್ ಹಿಲ್ಸ್ ವನದುರ್ಗ ಕಮರ್ಷಿಯಲ್ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಳ್ಳಲಿದೆ. ಇದರ ಉದ್ಘಾಟನಾ ಸಮಾರಂಭವು ಬೆಳ್ಮಣ್ ನ ಹೋಟೆಲ್ ಸೂರಜ್ ಇನ್ ಸಭಾಭವನದಲ್ಲಿ ನಡೆಯಲಿದ್ದು, ಬೆಳ್ಮಣ್ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ವೇದಮೂರ್ತಿ ವಿಘ್ನೇಶ್ ಭಟ್ ಅವರು ಉದ್ಘಾಟಿಸಲಿದ್ದಾರೆ.

ಸಾಂದೀಪನಿ ಸಾಧನಾಶ್ರಮದ ಶ್ರೀ ಶ್ರೀ ಈಶ ವಿಠಲ ದಾಸ ಸ್ವಾಮೀಜಿಯವರು ಹಾಗೂ ಬೆಳ್ಮಣ್ ಚರ್ಚಿನ ಧರ್ಮ ಗುರುಗಳಾದ ರೇ ಫಾ. ಫೆಡರಿಕ್ ಮಸ್ಕರೇನಸ್ ಆಶೀರ್ವಚನ ನೀಡಲಿದ್ದು, ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಅವರು ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಬಿ ಜಯಕರ ಶೆಟ್ಟಿ ಇಂದ್ರಾಳಿ ಅವರು ಭದ್ರತಾ ಕೊಠಡಿಯ ಉದ್ಘಾಟನೆ ಮಾಡಲಿದ್ದು, ಸುಹಾಸ್ ಹೆಗ್ಡೆ ನಂದಳಿಕೆ ಅವರು ಗಣಕಯಂತ್ರ ಉದ್ಘಾಟನೆ ಮಾಡಲಿದ್ದಾರೆ.