ಬಂಟರ ಸಂಘ ಮುಂಬಯಿ ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ಯುವ ವಿಭಾಗದ ಆಶ್ರಯದಲ್ಲಿ ರಕ್ತದಾನ ಶಿಬಿರ ಜುಲೈ 6ರಂದು ಎಸ್.ಎಂ ಶೆಟ್ಟಿ ಶಾಲೆ ಪೊವಾಯಿ ಇಲ್ಲಿ ನಡೆಯಿತು. ರಕ್ತದಾನ ಶಿಬಿರವನ್ನು ಬಂಟರ ಸಂಘ ಮುಂಬಯಿಯ ಅಧ್ಯಕ್ಷರಾದ ಪ್ರವೀಣ್ ಭೋಜ ಶೆಟ್ಟಿ, ಉಪಾಧ್ಯಕ್ಷ ಮಹೇಶ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್.ಕೆ ಶೆಟ್ಟಿ, ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಸೂರಜ್ ಶೆಟ್ಟಿ, ಪ್ರಸಿದ್ಧ ವೈದ್ಯ ಡಾ. ಸತ್ಯಪ್ರಕಾಶ್ ಶೆಟ್ಟಿ, ವೈದ್ಯಕೀಯ ಸಮಿತಿಯ ಕಾರ್ಯಾಧ್ಯಕ್ಷ ಡಾ. ಸ್ವರೂಪ್ ಹೆಗ್ಡೆ ಮತ್ತು ಇತರ ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಮಾತನಾಡುತ್ತಾ, ಬಂಟರ ಸಂಘಗಳ ಮೂಲಕ ಇಂತಹ ಹೆಚ್ಚಿನ ಸಮಾಜಸೇವಾ ಕಾರ್ಯಕ್ರಮಗಳು ನಡೆಯುತ್ತಿದ್ದು, ಪ್ರತಿ ವರ್ಷ 5000 ಯೂನಿಟ್ಗಳವರೆಗೆ ಸಂಗ್ರಹಿಸುವ ಕಾರ್ಯವನ್ನು ಮಾಡುತ್ತಿದ್ದೇವೆ. ಪ್ರತಿಯೊಬ್ಬರೂ ರಕ್ತದಾನ ಮಾಡುವ ಕ್ರಮವನ್ನು ರೂಡಿಸಿಕೊಳ್ಳಬೇಕು. ಅದರಿಂದ ಆರೋಗ್ಯಕ್ಕೂ ಒಳ್ಳೆಯದು ಎಂದು ನುಡಿದರು. ಡಾ. ಸತ್ಯಪ್ರಕಾಶ್ ಶೆಟ್ಟಿ ಮಾತನಾಡುತ್ತಾ, ಮಹಾರಾಷ್ಟ್ರದಾದ್ಯಂತ ರಕ್ತದಾನದ ಮಹತ್ವವನ್ನು ಅರಿತುಕೊಂಡು ಇಂಥಹ ಸೇವಾ ಕಾರ್ಯಗಳನ್ನು ಬಹಳಷ್ಟು ರಕ್ತದಾನಿಗಳು ದಾನವನ್ನು ಮಾಡುತ್ತಿದ್ದಾರೆ. ಪ್ರತಿದಿನ ರಕ್ತದ ಅವಶ್ಯಕತೆಗಳು ಹೆಚ್ಚು ಪ್ರಮಾಣದಲ್ಲಿದೆ. ಪ್ರತಿ ಯೂನಿಟ್ ರಕ್ತವು 3 ಜೀವಗಳನ್ನು ಉಳಿಸಬಹುದು ಎಂದು ಹೇಳಿದರು. ಪ್ರಾದೇಶಿಕ ಸಮಿತಿಯ ವೈದ್ಯಕೀಯ ಮತ್ತು ಆರೋಗ್ಯ ಸಮಿತಿಯ ಕಾರ್ಯಾಧ್ಯಕ್ಷ ಆನಂದ್ ಶೆಟ್ಟಿ ಅವರ ಕಾರ್ಯವನ್ನು ಶ್ಲಾಘಿಸಿ ಇಂತಹ ಶಿಬಿರಗಳು ಮತ್ತು ಚಟುವಟಿಕೆಗಳನ್ನು ಇನ್ನಷ್ಟು ನಡೆಸುವಂತೆ ಎಲ್ಲರೂ ಸಹಕಾರ ನೀಡಬೇಕು ಎಂದರು.
ರಕ್ತದಾನ ಶಿಬಿರವು ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಸೂರಜ್ ಶೆಟ್ಟಿ ಮತ್ತು ಯುವ ವಿಭಾಗದ ಕಾರ್ಯಾಧ್ಯಕ್ಷ ಅದ್ವಿತ್ ಪೂಂಜಾ ಅವರ ಸಮರ್ಥ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನಡೆಯಿತು. ಈ ಸಂದರ್ಭದಲ್ಲಿ ರಮೇಶ್ ರೈ, ಪ್ರಾದೇಶಿಕ ಸಮಿತಿಯ ಸಂಚಾಲಕ ರವೀಂದ್ರ ಶೆಟ್ಟಿ, ಕಾರ್ಯದರ್ಶಿ ತಾರಾನಾಥ ಶೆಟ್ಟಿ, ಉಪಾಧ್ಯಕ್ಷ ಯಶವಂತ್ ಶೆಟ್ಟಿ ಬನ್ನಂಜೆ, ಖಜಾಂಚಿ ಮೋಹನ್ದಾಸ್ ಶೆಟ್ಟಿ, ಜೊತೆ ಕೋಶಾಧಿಕಾರಿ ಅಭಿಷೇಕ್ ಶೆಟ್ಟಿ, ದತ್ತು ಸ್ವೀಕಾರ ಸಮಿತಿಯ ಕಾರ್ಯಾಧ್ಯಕ್ಷ ಲಕ್ಷ್ಮಣ್ ಶೆಟ್ಟಿ, ಸಮಾಜ ಕಲ್ಯಾಣ ಸಮಿತಿಯ ಕಾರ್ಯಾಧ್ಯಕ್ಷೆ ಭಾರತಿ ಶೆಟ್ಟಿ, ಮಹಿಳಾ ವಿಭಾಗದ ಮಾಜಿ ಕಾರ್ಯಾಧ್ಯಕ್ಷೆ ವಜ್ರ ಪೂಂಜಾ, ಮತ್ತಿತರ ಸದಸ್ಯರು, ಸದಸ್ಯತ್ವ ನೋಂದಣಿಕೆ ಸಮಿತಿಯ ಕಾರ್ಯಾಧ್ಯಕ್ಷ ಮನೀಶ್ ಶೆಟ್ಟಿ, ಮತ್ತಿತರ ಸಮಿತಿ ಸದಸ್ಯರು ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ಪ್ರಭಾಕರ್ ಶೆಟ್ಟಿ ನಿರೂಪಿಸಿದರು. ಮಹಿಳಾ ವಿಭಾಗದ ಅನಿತಾ ಶೆಟ್ಟಿಯವರು ಪ್ರಾರ್ಥನೆ ಮಾಡಿದರು.ಈ ರಕ್ತದಾನ ಶಿಬಿರದ ವ್ಯವಸ್ಥೆಯನ್ನು ನವೀನ್ ಶೆಟ್ಟಿ ತಮ್ಮ ಸಂಸ್ಥೆಯ ಮೂಲಕ ನಡೆಸಿದರು. ರಕ್ತದಾನದಲ್ಲಿ ಅಪಾರ ಸಂಖ್ಯೆಯಲ್ಲಿ ಸಮಾಜ ಬಾಂಧವರು ಭಾಗವಹಿಸಿ ರಕ್ತದಾನ ನೀಡಿದರು. ಸುಮಾರು 51 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಚಿತ್ರ, ವರದಿ : ದಿನೇಶ್ ಕುಲಾಲ್