ಬೋಂಬೆ ಬಂಟ್ಸ್ ಅಸೋಸಿಯೇಶನ್ ಸಾಂಸ್ಕೃತಿಕ ಸಮಿತಿಯ ಆಶ್ರಯದಲ್ಲಿ ಅಜೆಕಾರು ಕಲಾಭಿಮಾನಿ ಬಳಗದ ಊರಿನ ಪ್ರಸಿದ್ಧ ಕಲಾವಿದರಿಂದ ಜುಲೈ 17 ರಂದು ಸ್ವಾಮಿ ನಿತ್ಯಾನಂದ ಹಾಲ್ ಸಯನ್ ಇಲ್ಲಿ “ಅಂಬಾ ಶಪಥ” ತಾಳಮದ್ದಳೆ ನಡೆಯಿತು. ಅಸೋಸಿಯೇಷನ್ ಅಧ್ಯಕ್ಷರಾದ ಅಡ್ವಕೇಟ್ ಡಿ.ಕೆ ಶೆಟ್ಟಿಯವರು ಪ್ರಾರಂಭದಲ್ಲಿ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಬಳಿಕ ಮಾತನಾಡಿ, ವರ್ಷಪೂರ್ತಿ ಅಸೋಸಿಯೇಶನ್ ಸಾಂಸ್ಕೃತಿಕ ಸಮಿತಿಯ ಆಶ್ರಯದಲ್ಲಿ ಮನೋರಂಜನಾ ಕಾರ್ಯಕ್ರಮಗಳ ಅಂಗವಾಗಿ ನಾಟಕ, ಯಕ್ಷಗಾನ, ತಾಳಮದ್ದಲೆ ಮತ್ತಿತರ ವೈವಿಧ್ಯಮಯ ಕಾರ್ಯಕ್ರಮವು ನಡೆಯುತ್ತವೆ. ಕಲಾ ಪೋಷಕನಾಗಿರುವ ನಾನು ಕಲಾವಿದನಲ್ಲ. ನಮ್ಮ ಸಂಸ್ಥೆಯಲ್ಲಿ ಬಹಳಷ್ಟು ಒಳ್ಳೆಯ ಪ್ರತಿಭಾವಂತ ಕಲಾವಿದರಿದ್ದಾರೆ. ಅವರಿಗೂ ಮತ್ತು ಕಲಾವಿದರಿಗೆ ನಿರಂತರವಾಗಿ ಅಸೋಸಿಯೇಷನ್ ಪ್ರೋತ್ಸಾಹವನ್ನು ನೀಡುತ್ತಾ ಬಂದಿದೆ ಎಂದು ನುಡಿದರು.

ಅಸೋಸಿಯೇಷನ್ ಸಾಂಸ್ಕೃತಿಕ ಸಮಿತಿಯ ಕಾರ್ಯಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಅದ್ಯಪಾಡಿ ಸ್ವಾಗತಿಸಿ ಅಸೋಸಿಯೇಷನ್ ಬಗ್ಗೆ ಮಾತನಾಡಿ, ಮುಂದಿನ ಕಾರ್ಯಕ್ರಮಗಳ ಬಗ್ಗೆ ತಿಳಿಸಿ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದ ಸಮರ್ಪಿಸಿದರು. ಉದ್ಘಾಟನಾ ಸಂದರ್ಭದಲ್ಲಿ ಅಸೋಸಿಯೇಷನ್ ನ ಗೌರವ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಶೇಖರ್ ಆರ್ ಶೆಟ್ಟಿ, ಗೌರವ ಕೋಶಾಧಿಕಾರಿ ಸಿಎ ವಿಶ್ವನಾಥ್ ಎಸ್ ಶೆಟ್ಟಿ, ಜೊತೆ ಕೋಶಾಧಿಕಾರಿ ಸಿಎ ದಿವಾಕರ್ ಕೆ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಶಾಂತಾ ಎನ್ ಶೆಟ್ಟಿ, ಮಾಜಿ ಅಧ್ಯಕ್ಷರುಗಳಾದ ನ್ಯಾಯವಾದಿ ರತ್ನಾಕರ್ ಶೆಟ್ಟಿ, ಸಿಎ ಸುರೇಂದ್ರ ಕೆ ಶೆಟ್ಟಿ ಉಪಸ್ಥರಿದ್ದರು
ಉದ್ಘಾಟನೆಯ ಬಳಿಕ ಅಜೆಕಾರು ಕಲಾಭಿಮಾನಿ ಬಳಗದ ರೂವಾರಿ
ಅಜೆಕಾರು ಬಾಲಕೃಷ್ಣ ಶೆಟ್ಟಿಯವರು ತಾಳಮದ್ದಳೆ ಪ್ರದರ್ಶನ ನೀಡಲು ಅವಕಾಶ ನೀಡಿದ ಅಸೋಸಿಯೇಷನ್ ನ ಪದಾಧಿಕಾರಿಗಳನ್ನು ಗೌರವಿಸಿದರು. ನಂತರ “ಅಂಬಾ ಶಪಥ” ತಾಳಮದ್ದಳೆ ಪ್ರದರ್ಶನಗೊಂಡಿತು.
ಚಿತ್ರ, ವಿವರ : ದಿನೇಶ್ ಕುಲಾಲ್