ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಂಗಳೂರು, ಅಂಗನವಾಡಿ ಕೇಂದ್ರ ಕೋಟೆ ಸೂರಿಂಜೆ, ಲಯನ್ಸ್ ಕ್ಲಬ್ ಸುರತ್ಕಲ್, ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ಮತ್ತು ನಾಯರ್ ಕೋಡಿ ಫ್ರೆಂಡ್ಸ್ ಸರ್ಕಲ್ ಸಹಯೋಗದೊಂದಿಗೆ ಹೊಲಿಗೆ ತರಬೇತಿ ಕೇಂದ್ರ ಉದ್ಘಾಟನೆ ಮತ್ತು ಆಟಿಡೊಂಜಿ ದಿನ ಕಾರ್ಯಕ್ರಮ ಕೋಟೆ ಸೂರಿಂಜೆ ಅಂಗನವಾಡಿಯಲ್ಲಿ ಜರುಗಿತು. ಸುರತ್ಕಲ್ ಲಯನ್ಸ್ ಕ್ಲಬ್ ಅಧ್ಯಕ್ಷೆ ಶಶಿಕಲಾ ಶೆಟ್ಟಿ, ಸುರತ್ಕಲ್ ಸ್ಪೋರ್ಟ್ಸ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ಅಧ್ಯಕ್ಷ ಮನೋಹರ ಶೆಟ್ಟಿ ಸೂರಿಂಜೆ, ಸೂರಿಂಜೆ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ರಜಾಕ್, ಸುರತ್ಕಲ್ ಸ್ಪೋರ್ಟ್ಸ್ ಕ್ಲಬ್ ಮತ್ತು ಕಲ್ಚರಲ್ ಸೇವಾ ಟ್ರಸ್ಟ್ ಉಪಾಧ್ಯಕ್ಷ ನಾಗರಾಜ್ ಕಡಂಬೋಡಿ, ಪ್ರಧಾನ ಕಾರ್ಯದರ್ಶಿ ಕಿರಣ್ ಅಚಾರ್ಯ, ಸದಸ್ಯರಾದ ಕುಶಾಲ್ ಎಂ, ಸಂತೋಷ್ ಬೇಕಲ್, ರಾಜೇಶ್, ಗಿರೀಶ್ ಕೋಟೆ, ಪುಷ್ಪರಾಜ್ ಶೆಟ್ಟಿ ಮಧ್ಯ, ಲಯನ್ ಮೊಯಿದಿನ್ ಕುಂಙ, ಲಯನ್ ಅಲ್ವಿನ್ ನೊರೊನಾ, ಲಯನ್ ರಾಜಯ್ಯ, ಕಾಟಿಪಳ್ಳ ಅರೋಗ್ಯ ಇಲಾಖೆ ಹಿರಿಯ ಸಹಾಯಕಿ ನಾಗರತ್ನ , ಅಂಗನವಾಡಿ ಕಾರ್ಯಕರ್ತೆ ಪಾರ್ವತಿ, ಪುಷ್ಪರಾಜ್ ಕಣ್ವತೀರ್ಥ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸೂರಿಂಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ ಶೆಟ್ಟಿ ವಹಿಸಿದ್ದರು. ಶೈಲಜಾ ಮಧ್ಯ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಐದು ಹೊಲಿಗೆ ಯಂತ್ರ ಹಸ್ತಾಂತರ ಮಾಡಲಾಯಿತು.