ಜುಲೈ 21 ರಂದು ಎಂ.ಆರ್.ಜಿ ಗ್ರೂಪ್ ನ ಛೇರ್ಮನ್ ಡಾ| ಕೆ ಪ್ರಕಾಶ್ ಶೆಟ್ಟಿಯವರ ಹುಟ್ಟುಹಬ್ಬದ ಪ್ರಯುಕ್ತ ಸಾಗರ ಬಂಟರ ಯಾನೆ ನಾಡವರ ಸಂಘವು ಡಾ| ಕೆ ಪ್ರಕಾಶ್ ಶೆಟ್ಟಿ ಅಭಿಮಾನಿ ಬಳಗದ ಸಹಯೋಗದೊಂದಿಗೆ ಸಾಗರ ರೋಟರಿ ರೆಡ್ ಕ್ರಾಸ್ ಬ್ಲಡ್ ಸೆಂಟರ್ ನಲ್ಲಿ ರಕ್ತದಾನ ಶಿಬಿರ ಹಾಗೂ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ನಡೆಯಿತು. ಯುವ ಉದ್ಯಮಿ ಹಾಗೂ ಸಾಗರ ಬಂಟರ ಸಂಘದ ಅಧ್ಯಕ್ಷರಾದ ಸುಧೀರ್ ಶೆಟ್ಟಿ ಹಕ್ಲಾಡಿಯವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.

ಅತಿಥಿಗಳಾಗಿ ಮ.ಸ ನಂಜುಂಡಸ್ವಾಮಿ, ಸಾಗರ ರೋಟರಿ ಕ್ಲಬ್ ಅಧ್ಯಕ್ಷರಾದ ಶಿವಕುಮಾರ್, ಖ್ಯಾತ ವೈದ್ಯ ಡಾ. ಸಂಗಮ್ ರವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಸಾಗರ ಬಂಟರ ಸಂಘದ ಮುಖಂಡರು ಹಾಗೂ ಡಾ| ಕೆ ಪ್ರಕಾಶ್ ಶೆಟ್ಟಿಯವರ ಅಭಿಮಾನಿಗಳು ಭಾಗಿಯಾಗಿದ್ದರು.