ಉಡುಪಿ ಗ್ರಾಮೀಣ ಬಂಟರ ಸಂಘದ ವತಿಯಿಂದ ಕುಂತಳನಗರ ಆಶಾ ಪ್ರಕಾಶ್ ಶೆಟ್ಟಿ ಕನ್ವೆನ್ಷನ್ ಹಾಲ್ ನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ ಜುಲೈ 27ರಂದು ಯಶಸ್ವಿಯಾಗಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಉಡುಪಿ ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಡಾ. ಎಚ್.ಬಿ ಶೆಟ್ಟಿ ಬೆಳ್ಳೆ ಸ್ವಾಗತಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭವನ್ನು ಹಾರೈಸಿದರು. ಮುಖ್ಯ ಅತಿಥಿಗಳಾದ ಮೂಳೂರು ಸುನಂದ ವೆಲ್ನೆಸ್ ಸೆಂಟರ್ ನ ಡಾ. ನಿರಂಜನ್ ಎಸ್. ಶೆಟ್ಟಿ, ಪಂಜುರ್ಲಿ ಗ್ರೂಪ್ ಆಫ್ ಹೋಟೆಲ್ಸ್ ಸಂಸ್ಥಾಪಕ ರಾಜೇಂದ್ರ ವಿ. ಶೆಟ್ಟಿ, ವಾಗ್ಮಿ ಜಾನಪದ ಚಿಂತಕ ಶ್ರೀಕಾಂತ್ ಶೆಟ್ಟಿ ಆಟಿಡೊಂಜಿ ದಿನದ ಮಹತ್ವದ ಬಗ್ಗೆ ಮಾತನಾಡಿದರು. ಚಲನಚಿತ್ರ ನಟ ಶೋಧನ್ ಉಮೇಶ್ ಶೆಟ್ಟಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.

ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಶೋಕ ಕುಮಾರ ಶೆಟ್ಟಿ, ಸಂಘದ ಮಾಜಿ ಅಧ್ಯಕ್ಷರಾದ ಅಲೆವೂರು ಶ್ರೀಧರ್ ಶೆಟ್ಟಿ, ಹೇಮಂತ್ ಶೆಟ್ಟಿ, ಕಾರ್ಯಾಧ್ಯಕ್ಷ ಪದ್ಮನಾಭ ಹೆಗ್ಡೆ, ಕಾರ್ಯದರ್ಶಿ ಕಾರ್ತಿಕ್ ಶೆಟ್ಟಿ, ಖಜಾಂಚಿ ರಂಜನಿ ಹೆಗ್ಡೆ ಬೆಳ್ಳೆ ಉಪಸ್ಥಿತರಿದ್ದರು. ಕಾರ್ಯದರ್ಶಿ ವಿಜಿತ್ ಶೆಟ್ಟಿ ಕೊರಂಗ್ರಪಾಡಿ ವಂದಿಸಿದರು. ಪ್ರೊ. ಸುಧೀರ್ ರಾಜ್ ಕೆ. ನಿರೂಪಿಸಿದರು. ಕಾರ್ಯಕ್ರಮದ ಕೊನೆಯಲ್ಲಿ ಸಹಭೋಜನ ನಡೆಯಿತು.