ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ತಾಲೂಕು ಮತ್ತು ಸರಕಾರಿ ಪದವಿಪೂರ್ವ ಕಾಲೇಜು ಉಪ್ಪುಂದ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಉಡುಪಿ ಜಿಲ್ಲಾ ಮಟ್ಟದ ಚದುರಂಗ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಪ್ರಕೃತಿ ಪಿ. ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ. ವಿಜೇತ ವಿದ್ಯಾರ್ಥಿನಿಗೆ ಸಮಾರೋಪ ಸಮಾರಂಭದಲ್ಲಿ ವಿಜಯ ಫಲಕ ಹಾಗೂ ಪ್ರಶಸ್ತಿ ಪತ್ರ ನೀಡಿ ಇನ್ನು ಹೆಚ್ಚಿನ ಸಾಧನೆಗೆ ಹಾರೈಸಲಾಯಿತು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸತೀಶ್ ಕುಮಾರ್ ಮಾರ್ಗದರ್ಶನ ನೀಡಿದ್ದರು. ಸಂಸ್ಥೆಯ ವಸತಿ ನಿಲಯದ ಪಾಲಕಿ ಸ್ಪೂರ್ತಿ ತಂಡ ವ್ಯವಸ್ಥಾಪಕಿಯಾಗಿ ಕಾರ್ಯವನ್ನು ನಿರ್ವಹಿಸಿದ್ದರು.

ಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ, ಕಾರ್ಯದರ್ಶಿ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯರಾದ ಪ್ರದೀಪ್. ಕೆ ವಿಜೇತ ತಂಡವನ್ನು ಅಭಿನಂದಿಸಿದರು. ಸುಜ್ಞಾನ ಎಜುಕೇಶನ್ ಟ್ರಸ್ಟ್ ನ ಸಂಸ್ಥೆಗಳಾದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ ಪದವಿ ಪೂರ್ವ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ಸಂತಸ ವ್ಯಕ್ತಪಡಿಸಿದರು.