ಬಂಟರ ಸಂಘ ಕಟಪಾಡಿ ವತಿಯಿಂದ ಆಟಿಡ್ ಒಂಜಿ ದಿನ ಕಾರ್ಯಕ್ರಮವು ಕಟಪಾಡಿ ಎಸ್ ವಿ ಎಸ್ ಕಾಲೇಜು ಸಭಾಭವನದಲ್ಲಿ ಸಂಘದ ಅಧ್ಯಕ್ಷರಾದ ದಯಾನಂದ ಆರ್. ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ದೀಪ ಬೆಳಗಿಸಿ ಚಾಲನೆಯನ್ನು ನೀಡಿದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನ್ಯಾಯವಾದಿ ಮಟ್ಟಾರು ರತ್ನಾಕರ್ ಹೆಗ್ಡೆ ಮಾತನಾಡಿ, ಪೂರ್ವಜರ ಆಟಿಯ ದಿನಗಳು ಇಂದು ಆಚರಿಸುವ ಮಹತ್ವವನ್ನು ತಿಳಿಸಿದರು.

ಮುಖ್ಯ ಅತಿಥಿಗಳಾಗಿದ್ದ ಪಡುಬಿದ್ರಿ ಆಸ್ಟಿನ್ ಸೆಜ್ ಸೀನಿಯರ್ ಜನರಲ್ ಮ್ಯಾನೇಜರ್, ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಅಶೋಕ ಕುಮಾರ ಶೆಟ್ಟಿ, ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷ ನವೀನ್ ಚಂದ್ರ ಜೆ. ಶೆಟ್ಟಿ ಪಡುಬಿದ್ರಿ, ಉಡುಪಿ ಶ್ರೀ ಗುರು ನಿತ್ಯಾನಂದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಸುರೇಶ್ ಶೆಟ್ಟಿ ಶುಭ ಹಾರೈಸಿದರು. ಸಮಾಜ ಸೇವಕ ವಿಶು ಶೆಟ್ಟಿ ಅಂಬಲಪಾಡಿ, ಪ್ರತಿಭಾವಂತೆ ಸುಹನಾ ಶೆಟ್ಟಿ ಹಾಗೂ ಹಲವು ಸಾಧಕರನ್ನು ಸನ್ಮಾನಿಸಲಾಯಿತು.
ವೇದಿಕೆಯಲ್ಲಿ ಹಿರಿಯ ವೈದ್ಯ ಡಾ. ಎ. ರವೀಂದ್ರನಾಥ ಶೆಟ್ಟಿ, ಕಟಪಾಡಿ ಗಣೇಶೋತ್ಸವ ಸಮಿತಿ ಅಧ್ಯಕ್ಷ ಕಟಪಾಡಿ ಬಂಟರ ಸಂಘದ ಗೌರವಾಧ್ಯಕ್ಷ ದಯಾನಂದ ವಿ. ಶೆಟ್ಟಿ, ಸಮಾಜ ಸೇವಕಿ ಮಣಿಪುರ ಬಡಗುಮನೆ ಬಿಂದು ಶೆಟ್ಟಿ, ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಪ್ರಭಾ ಬಿ. ಶೆಟ್ಟಿ, ಬಂಟರ ಮಾತೃ ಸಂಘ ಉಡುಪಿ ತಾಲೂಕು ಸಮಿತಿಯ ನಿರ್ದೇಶಕ ಕಟಪಾಡಿ ಬೀಡು ಸುಭಾಷ್ ಬಳ್ಳಾಲ್, ಬಂಟರ ಮಹಿಳಾ ವೇದಿಕೆ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಉಪನ್ಯಾಸಕಿ ಕೀರ್ತಿ ದೀಕ್ಷಿತ್ ಶೆಟ್ಟಿ, ಅಗ್ರಹಾರ ವೀರ ಸ್ತಂಭ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ, ಕಟಪಾಡಿ ಬಂಟರ ಸಂಘದ ಗೌರವಾಧ್ಯಕ್ಷ ವೈ ಭರತ್ ಹೆಗ್ಡೆ, ಕಟಪಾಡಿ ಬಂಟರ ಸಂಘದ ಪೂರ್ವಾಧ್ಯಕ್ಷ ವೈ. ರಂಜನ್ ಹೆಗ್ಡೆ, ಕಾರ್ಯದರ್ಶಿ ಉಮೇಶ್ ಶೆಟ್ಟಿ, ಕೋಶಾಧಿಕಾರಿ ಪ್ರಭಾಕರ ಶೆಟ್ಟಿ ಉಪಸ್ಥಿತರಿದ್ದರು.