ಬದುಕಿನ ಔನ್ನತ್ಯಕ್ಕೆ ಗುರು ಹಿರಿಯರ ಮಾರ್ಗದರ್ಶನ ಪ್ರೇರಣೆಯೆ ಕಾರಣ. ಸಂಸ್ಕೃತಿ, ಸಂಸ್ಕಾರ ಕಲಿಸಿಕೊಟ್ಟು ಬದುಕು ರೂಪಿಸುವ ಶಿಕ್ಷಣ ಸಂಸ್ಥೆಗಳ ಮೇಲೆ ಅಭಿಮಾನವಿರಿಸಿ ಬೆಂಬಲಿಸಬೇಕು ಎಂದು ಎಚ್.ಪಿ.ಸಿ.ಎಲ್ ಬಾಳ ಸಂಸ್ಥೆಯ ಜನರಲ್ ಮ್ಯಾನೇಜರ್ ಪ್ರಕಾಶ್ ಕುಮಾರ್ ಪಟ್ನಾಯಕ್ ನುಡಿದರು. ಅವರು ಮಧ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಗೆ ಎಚ್.ಪಿ.ಸಿ.ಎಲ್ ಬಾಳ ಸಂಸ್ಥೆಯ ವತಿಯಿಂದ ಸುಮಾರು 15 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಬಾಲಕರ ಮತ್ತು ಬಾಲಕಿಯರ ಶೌಚಾಲಯ ಹಾಗೂ ಕೊಳವೆ ಬಾವಿಯನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದ ಸರಕಾರಿ ಶಾಲೆಯು ಅತೀ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿದ ಎಲ್ಲಾ ಮೂಲಭೂತ ಸೌಕರ್ಯಗಳನ್ನು ಒಳಗೊಂಡ ಶಾಲೆಯಾಗಿರುವುದು ಶ್ಲಾಘನೀಯ. ಮುಂದೆಯೂ ನಮ್ಮ ಸಂಸ್ಥೆಯ ವತಿಯಿಂದ ಈ ಶಾಲೆಗೆ ಸಂಪೂರ್ಣ ಸಹಕಾರ ನೀಡಲಾಗುವುದು ಎಂದರು.

ವೇದಿಕೆಯಲ್ಲಿ ಎಚ್.ಪಿ.ಸಿ.ಎಲ್ ಸಂಸ್ಥೆಯ ಆಪರೇಷನ್ ವಿಭಾಗದ ಸೀನಿಯರ್ ಮ್ಯಾನೇಜರ್ ವೆಂಕಟೇಶ್ ಚಿಂತಾಕಿಂಡಿ, ಮ್ಯಾನೇಜರ್ ಸೃಷ್ಠಿ, ಎಚ್.ಆರ್ ವಿಭಾಗದ ಅಸಿಸ್ಟೆಂಟ್ ವಾಸು ನಾಯಕ್ ಎಸ್, ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಕೋಶಾಧಿಕಾರಿ ವಿಟ್ಟಲ ಶೆಟ್ಟಿ, ಸದಸ್ಯರಾದ ವಜ್ರಾಕ್ಷಿ ಪಿ. ಶೆಟ್ಟಿ, ಬಾಲಕೃಷ್ಣ ಶೆಟ್ಟಿ ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಅನಿಲ್ ಸಾಲ್ಯಾನ್, ಸದಸ್ಯರಾದ ಪರಮೇಶ್ವರ್ ಮುಂತಾದವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ಪ್ರಪುಲ್ಲ ಪಂಜ ವಹಿಸಿದ್ದರು. ಶಾಲಾ ಮುಖ್ಯ ಶಿಕ್ಷಕಿ ಜೇನ್ ಡಿ ಸೋಜಾ ಸ್ವಾಗತಿಸಿದರು. ಶಿಕ್ಷಕಿ ಶೈಲಾ ಧನ್ಯವಾದ ಸಮರ್ಪಿಸಿದರು. ಶಿಕ್ಷಕ ಹರೀಶ್ ಕಾರ್ಯಕ್ರಮ ನಿರೂಪಿಸಿದರು