ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ ಕಾತ್ರಜ್ ಪುಣೆ ಆವರಣದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಯಕ್ಷಗಾನ ಪ್ರದರ್ಶನ ಕಾರ್ಯಕ್ರಮ ಆಗಸ್ಟ್ 9 ರಂದು ನಡೆಯಲಿದೆ. ಶ್ರೀ ಸತ್ಯನಾರಾಯಣ ಪೂಜೆಯು ದೇವಸ್ಥಾನದ ಪ್ರಧಾನ ಅರ್ಚಕ ರಾಘವೇಂದ್ರ ಭಟ್ ನೇತೃತ್ವದಲ್ಲಿ ಅಪರಾಹ್ನ 4ಕ್ಕೆ ಆರಂಭಗೊಳ್ಳಲಿದ್ದು, 5.30ಕ್ಕೆ ಮಹಾಪೂಜೆ, ಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 6ರಿಂದ ದೇವಸ್ಥಾನದ ರಂಗಮಂಟಪದಲ್ಲಿ ಪ್ರವೀಣ್ ಶೆಟ್ಟಿ ಪುತ್ತೂರು ಸಾರಥ್ಯದ ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ಪುಣೆ ಕಲಾವಿದರು ಮತ್ತು ಊರ ಪರವೂರ ಹೆಸರಾಂತ ಕಲಾವಿದರ ಕೂಡುವಿಕೆಯಲ್ಲಿ ಸ್ವಾಮಿ ಕೊರಗಜ್ಜ ಎಂಬ ತುಳು ಪೌರಾಣಿಕ ಪ್ರಸಂಗ ಪ್ರದರ್ಶನಗೊಳ್ಳಲಿದೆ.

ಯಕ್ಷಗಾನದ ಬಳಿಕ ಮಹಾಪ್ರಸಾದ ರೂಪದಲ್ಲಿ ಅನ್ನ ಸಂತರ್ಪಣೆ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಶ್ರೀ ಸತ್ಯನಾರಾಯಣ ದೇವರು, ಶ್ರೀ ಅಯ್ಯಪ್ಪ ಸ್ವಾಮಿಯ ಕೃಪೆಗೆ ಪಾತ್ರರಾಗಬೇಕಾಗಿ ದೇವಸ್ಥಾನದ ವಿಶ್ವಸ್ಥ ಮಂಡಳಿ ಅಧ್ಯಕ್ಷ ಸುಭಾಷ್ ಶೆಟ್ಟಿ ಮತ್ತು ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಪದಾಧಿಕಾರಿಗಳು, ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ಪುಣೆ ಅಧ್ಯಕ್ಷ ಪ್ರವೀಣ್ ಶೆಟ್ಟಿ ಪುತ್ತೂರು ಮತ್ತು ಮಂಡಳಿ ಕಲಾವಿದರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಾಮೂಹಿಕ ಸತ್ಯನಾರಾಯಣ ಪೂಜೆ ಮಾಡಲಿಚ್ಛಿಸುವ ಭಕ್ತರು ಹೆಚ್ಚಿನ ಮಾಹಿತಿಗಾಗಿ ರಮೇಶ್ ರೈ 9975362133 ಹಾಗೂ ರಶ್ವಿತ್(6364225113) ಅವರನ್ನು ಸಂಪರ್ಕಿಸಬಹುದು.
ವರದಿ : ಹರೀಶ್ ಮೂಡುಬಿದ್ರಿ, ಪುಣೆ