ಬಂಟರ ಯಾನೆ ನಾಡವರ ಮಾತೃಸಂಘ ಮತ್ತು ಶ್ರೀ ಸಿದ್ದಿ ವಿನಾಯಕ ಪ್ರತಿಷ್ಠಾನ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಓಂಕಾರ ನಗರ ಬಂಟ್ಸ್ ಹಾಸ್ಟೇಲ್ ಮಂಗಳೂರು ಇದರ ಆಶ್ರಯದಲ್ಲಿ ಆಗೋಸ್ಟ್ 27 ರಿಂದ 29 ರ ವರೆಗೆ ನಡೆಯುವ 19 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ತೆನೆಹಬ್ಬ, ಅಷ್ಟೋತ್ತರ ಸಹಸ್ರ ನಾರಿಕೇಳ ಮಹಾಗಣಯಾಗದ ಆಮಂತ್ರಣ ಪತ್ರಿಕೆ ಬಿಡಗಡೆ ಸಮಾರಂಭವು ಬಂಟ್ಸ್ ಹಾಸ್ಟೇಲ್ ನಲ್ಲಿರುವ ಗೀತಾ ಎಸ್ ಎಂ ಶೆಟ್ಟಿ ಸಭಾಭವನದಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಮ್ಯಾನೇಜಿಂಗ್ ಟ್ರಸ್ಟಿ ಕೊಡಿಯಾಲ್ ಗುತ್ತು ಅಜಿತ್ ಕುಮಾರ್ ರೈ ವಹಿಸಿದ್ದರು.

ಎಲ್ಲಾ ಜಾತಿ ಮತ ಬಾಂಧವರ ಸಹಕಾರದಿಂದ ಶ್ರದ್ದಾ ಭಕ್ತಿಯೊಂದಿಗೆ ನಡೆಯುವ ದೇವತಾ ಕಾರ್ಯಕ್ರಮದಲ್ಲಿ ಎಲ್ಲರೂ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ವಿನಂತಿಸಿದರು. ಕಾರ್ಯಕ್ರಮದ ಯಶಸ್ಸಿಗೆ ಕೆಲವು ಸಮಿತಿಗಳನ್ನು ರಚಿಸಿ ಜವಾಬ್ದಾರಿಗಳನ್ನು ನೀಡಲಾಗಿದೆ. ಇನ್ನು ಕೆಲವರು ದೇವರ ಕೆಲಸ ಎಂದು ತೆರೆಮರೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.
ಕಾರ್ಯಕ್ರಮವನ್ನು ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಆಡಳಿತ ಮುಖ್ಯಸ್ಥರಾದ ಡಾ. ಮಂಜಯ್ಯ ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಿದರು. ಸಮಾರಂಭದಲ್ಲಿ ಬಂಟರ ಮಾತೃ ಸಂಘದ ಉಪಾಧ್ಯಕ್ಷ ಹೇಮನಾಥ ಶೆಟ್ಟಿ ಕಾವು, ಪ್ರಧಾನ ಕಾರ್ಯದರ್ಶಿ ಕೆ ಎಂ ಶೆಟ್ಟಿ, ಕೋಶಾಧಿಕಾರಿ ರಾಮ್ ಮೋಹನ್ ರೈ ಟ್ರಸ್ಟಿಗಳಾದ ನಿಟ್ಟೆ ಗುತ್ತು ರವಿರಾಜ್ ಶೆಟ್ಟಿ, ಕೃಷ್ಣಪ್ರಸಾದ್ ರೈ, ಡಾ. ಆಶಾಜ್ಯೋತಿ ರೈ, ಮಂಗಳೂರು ತಾಲೂಕು ವ್ಯಾಪ್ತಿಯ ವಿವಿಧ ಬಂಟರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ಮಹಿಳಾ ವೇದಿಕೆಯ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು. ವಿವಿಧ ಉಪಸಮಿತಿಗಳ ಜವಾಬ್ದಾರಿಗಳ ಕುರಿತು ಡಾ. ಆಶಾಜ್ಯೋತಿ ರೈ ಮಾಹಿತಿ ನೀಡಿದರು. ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಕೃಷ್ಣಪ್ರಸಾದ್ ರೈ ಸ್ವಾಗತಿಸಿದರು. ಸಿಂಧು ಭೈರವಿ ಭಜನಾ ತಂಡದ ಸದಸ್ಯರು ಪ್ರಾರ್ಥನೆಗೈದರು. ಪ್ರಕಾಶ್ ಮೇಲಾಂಟ ಕಾರ್ಯಕ್ರಮ ನಿರ್ವಹಿಸಿದರು. ಸದಾಶಿವ ಶೆಟ್ಟಿ ವಂದಿಸಿದರು.