ನಿರುದ್ಯೋಗ ನಿವಾರಣೆ, ಯುವ ಜನರಿಗೆ ಉದ್ಯೋಗ ಮಾರ್ಗದರ್ಶನ, ಉಚಿತ ಕಂಪ್ಯೂಟರ್ ತರಬೇತಿಯು ಉಡುಪಿ ಗ್ರಾಮೀಣ ಬಂಟರ ಚಾರಿಟೇಬಲ್ ಟ್ರಸ್ಟ್ ಉಚಿತವಾಗಿ ನೀಡುತ್ತಿರುವ ಕಂಪ್ಯೂಟರ್ ಸಾಕ್ಷರತಾ ತರಬೇತಿಯು ಉತ್ತಮ ಹೆಜ್ಜೆಯಾಗಿದೆ. ಸದುಪಯೋಗದ ಮೂಲಕ ಸವಾಲುಗಳನ್ನು ಮೆಟ್ಟಿನಿಂತು ಸುಂದರ ಬದುಕನ್ನು ಕಟ್ಟಿಕೊಳ್ಳಿರಿ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ನ್ಯಾಯವಾದಿ ಮಟ್ಟಾರು ರತ್ನಾಕರ್ ಹೆಗ್ಡೆ ಹೇಳಿದರು. ಅವರು ಆಗಸ್ಟ್ 9ರಂದು ಉಡುಪಿ ಗ್ರಾಮೀಣ ಬಂಟರ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕುಂತಳನಗರ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನಲ್ಲಿ ಆಲ್ ಕಾರ್ಗೋ ಲಾಜಿಸ್ಟಿಕ್ ಕಂಪನಿ ಮಂಗಳೂರು ಪ್ರಾಯೋಜಕತ್ವದಲ್ಲಿ ಉಡುಪಿಯ ಮೈಸ್ ಕಂಪ್ಯೂಟರ್ ಸಹಾಯೋಗದಲ್ಲಿ ನಡೆಯುತ್ತಿರುವ ಒಂದು ತಿಂಗಳ ಉಚಿತ ಕಂಪ್ಯೂಟರ್ ಸಾಕ್ಷರತಾ ತರಬೇತಿಯು 19-20 ನೇ ಬ್ಯಾಚ್ ನ ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ವಿತರಣಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಪಡುಬಿದ್ರಿ ಬಂಟರ ಸಂಘದ ಮಾಜಿ ಅಧ್ಯಕ್ಷ, ಕೆಪಿಸಿಸಿ ಕೋ ಆರ್ಡಿನೇಟರ್ ನವೀನ್ ಚಂದ್ರ ಜೆ. ಶೆಟ್ಟಿ ಪಡುಬಿದ್ರಿ ಮಾತನಾಡಿ, ಯುವಜನತೆಯ ಬದುಕು ರೂಪಿಸುವ ಉತ್ತಮ ಭವಿಷ್ಯದ ದೃಷ್ಟಿಕೋನದಲ್ಲಿ ಗ್ರಾಮೀಣ ಬಂಟರ ಚಾರಿಟೇಬಲ್ ಟ್ರಸ್ಟ್ ನಡೆಸುವ ಚಟುವಟಿಕೆಯು ಮಾದರಿ ಎಂದರು. ಅಧ್ಯಕ್ಷತೆ ವಹಿಸಿದ್ದ ಉಡುಪಿ ಗ್ರಾಮೀಣ ಬಂಟರ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಮಾತನಾಡಿ, ಮಹಿಳೆಯರು, ಯುವಜನತೆಯ ಸಬಲೀಕರಣಕ್ಕಾಗಿ ಕೌಶಲ ಅಭಿವೃದ್ಧಿ, ತಾಂತ್ರಿಕ ಜ್ಞಾನ ಹಾಗೂ ಜಾಬ್ ಮೇಳದ ಮೂಲಕ ಚಾರಿಟೇಬಲ್ ಟ್ರಸ್ಟ್ ನಿರಂತರತೆಯನ್ನು ಕಾಯ್ದುಕೊಂಡಿದ್ದು ಮುಂಬರುವ ಅಕ್ಟೋಬರ್ ತಿಂಗಳಲ್ಲಿ ಎಂಆರ್ ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ಜಾಬ್ ಮೇಳ ನಡೆಸಲಾಗುತ್ತದೆ ಎಂದರು.
ವೇದಿಕೆಯಲ್ಲಿ ಮಣಿಪಾಲ ಎಚ್.ಪಿ.ಆರ್ ಗ್ರೂಪ್ ಆಫ್ ಇನ್ಸ್ಟಿಟ್ಯೂಶನ್ ಅಧ್ಯಕ್ಷ ಹರಿಪ್ರಸಾದ್ ರೈ, ಡಾ. ನಿರಂಜನ್ ಶೆಟ್ಟಿ, ಉಡುಪಿ ಗ್ರಾಮೀಣ ಬಂಟರ ಸಂಘದ ಅಧ್ಯಕ್ಷ ಡಾ. ಎಚ್. ಬಿ. ಶೆಟ್ಟಿ, ಸಮಾಜ ಸೇವಕಿ ಮಣಿಪುರ ಬಡಗು ಮನೆ ಬಿಂದು ಶೆಟ್ಟಿ, ಮೈಸ್ ನ ರವಿ ಕೋಟ್ಯಾನ್, ವಿಷ್ಣುಮೂರ್ತಿ ಆಚಾರ್ಯ, ಉಡುಪಿ ಗ್ರಾಮೀಣ ಬಂಟರ ಚಾರಿಟೇಬಲ್ ಟ್ರಸ್ಟ್ ಕೋಶಾಧಿಕಾರಿ ಕಾರ್ಯಕ್ರಮ ಸಂಯೋಜಕ ವಿಜಿತ್ ಶೆಟ್ಟಿ, ಕಾರ್ಯಕ್ರಮ ಸಂಯೋಜಕ ಪದ್ಮನಾಭ ಹೆಗ್ಡೆ, ಟ್ರಸ್ಟಿಗಳಾದ ದಯಾನಂದ ಆರ್ ಶೆಟ್ಟಿ, ಜಗದೀಶ್ ಹೆಗ್ಡೆ ಪಳ್ಳಿ, ಅಶೋಕ್ ಶೆಟ್ಟಿ ಕೆಮ್ತೂರು, ದಿವಾಕರ ಶೆಟ್ಟಿ, ರಮೇಶ್ ಶೆಟ್ಟಿ ನಿಂಜೂರು, ರಂಜಿನಿ ಹೆಗ್ಡೆ ಬೆಳ್ಳೆ, ಹರೀಂದ್ರ ಶೆಟ್ಟಿ ಉಪಸ್ಥಿತರಿದ್ದರು. ಪ್ರೊ ಸುಧೀರ್ ರಾಜ್ ಕೆ. ನಿರೂಪಿಸಿದರು.