ಬಂಟರ ಸಂಘ ಮುಂಬಯಿಯ ಜೋಗೇಶ್ವರಿ ದಹಿಸರ್ ಸಮಿತಿಯ ವತಿಯಿಂದ ಇದೇ ಬರುವ ಆಗಸ್ಟ್ 15 ರಂದು ಶುಕ್ರವಾರ ಅಪರಾಹ್ನ 2.30 ಕ್ಕೆ ಸರಿಯಾಗಿ ಕಾಂದಿವಲಿ ಪಶ್ಚಿಮದ ಮಹಾವೀರ ನಗರದಲ್ಲಿರುವ ಕಮಲಾ ವಿಹಾರ್ ಸ್ಪೋರ್ಟ್ಸ್ ಕ್ಲಬ್ ನ ಸಭಾಂಗಣದಲ್ಲಿ ಅಜೆಕಾರು ಕಲಾಭಿಮಾನಿ ಬಳಗದ ಸಂಚಾಲಕತ್ವದ ಊರಿನ ಸುಪ್ರಸಿದ್ಧ ಆಟಕೂಟಗಳ ಹಿಮ್ಮೇಳ ಹಾಗೂ ಮುಮ್ಮೇಳದ ಕಲಾವಿದರ ಸಮಾಗಮದೊಂದಿಗೆ “ಕೃಷ್ಣ ರಾಜಿ ಪ್ರಸಂಗೊ- ಅಂಕೊದ ಬೂಲ್ಯ” (ಕೃಷ್ಣ ಸಂಧಾನ – ಧುರ ವೀಳ್ಯ) ಎಂಬ ತುಳು ಯಕ್ಷಗಾನ ತಾಳಮದ್ದಳೆಯು ಸಂಪನ್ನಗೊಳ್ಳಲಿದೆ. ನಗರದಲ್ಲಿರುವ ಕನ್ನಡ ಭಾಷೆಯನ್ನರಿಯದ ತುಳುವರಿಗೆ ಯಕ್ಷಗಾನ ತಾಳಮದ್ದಳೆಯ ಸವಿಯನ್ನುಣ್ಣಿಸುವ ಉದ್ದೇಶದಿಂದಲೇ ಹಮ್ಮಿಕೊಂಡ ಈ ಕೂಟದಲ್ಲಿ ಊರಿನಿಂದ ಆಗಮಿಸಿದ ಆಟಕೂಟಗಳ ಬಹಳ ಬೇಡಿಕೆಯ ಕಲಾವಿದರುಗಳು ಶ್ರೋತೃಗಳನ್ನು ಮಂತ್ರ ಮುಗ್ಧಗೊಳಿಸಲಿದ್ದಾರೆ.

ಕಲಾವಿದರಾಗಿ ಭಾಗವತರು : ದೇವಿಪ್ರಸಾದ್ ಆಳ್ವ ತಲಪಾಡಿ, ಚೆಂಡೆ: ಸುಬ್ರಮಣ್ಯ ಭಟ್ ದೇಲಂತಮಜಲು, ಮದ್ದಳೆ: ಪ್ರಶಾಂತ ಶೆಟ್ಟಿ ವಗೆನಾಡು, ಶ್ರೀ ಕೃಷ್ಣ: ಡಾ| ಎಂ. ಪ್ರಭಾಕರ ಜೋಶಿ, ಕೌರವ: ಜಯಪ್ರಕಾಶ್ ಶೆಟ್ಟಿ ಪೆರ್ಮುದೆ, ವಿದುರ: ಭಾಸ್ಕರ ರೈ ಕುಕ್ಕುವಳ್ಳಿ, ಭೀಮ : ಸದಾಶಿವ ಆಳ್ವ ತಲಪಾಡಿ, ದ್ರೌಪದಿ: ದಿನೇಶ್ ಶೆಟ್ಟಿ ಕಾವಲಕಟ್ಟೆಯವರು ಪಾಲ್ಗೊಳ್ಳಲಿದ್ದಾರೆ.
ಬಂಟರ ಸಂಘ ಮುಂಬಯಿಯ ಅಧ್ಯಕ್ಷರಾದ ಪ್ರವೀಣ ಭೋಜ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ, ಜೋಗೇಶ್ವರಿ ದಹಿಸರ್ ಸಮಿತಿಯ ಕಾರ್ಯಾಧ್ಯಕ್ಷರಾದ ಪ್ರೇಮನಾಥ ಶೆಟ್ಟಿ ಕೊಂಡಾಡಿ ಇವರ ಮುಂದಾಳತ್ವದಲ್ಲಿ ಆಯೋಜಿಸಲಾದ ಈ ಯುಕ್ಷಗಾನ ತಾಳಮದ್ದಳೆಗೆ ಅತ್ಯಧಿಕ ಸಂಖ್ಯೆಯಲ್ಲಿ ಕಲಾಭಿಮಾನಿಗಳು ಆಗಮಿಸಿ, ಕಾರ್ಯಕ್ರಮವನ್ನು ಚಂದಗಾಣಿಸಿಕೊಡಬೇಕಾಗಿ ಬಂಟರ ಸಂಘ ಮುಂಬಯಿಯ ಉಪಾಧ್ಯಕ್ಷರಾದ ಮಹೇಶ್ ಎಸ್ ಶೆಟ್ಟಿ, ಗೌರವ ಪ್ರಧಾನ ಕಾರ್ಯದರ್ಶಿ ಡಾ| ಆರ್.ಕೆ ಶೆಟ್ಟಿ, ಗೌ. ಕೋಶಾಧಿಕಾರಿ ಸಿ.ಎ ರಮೇಶ್ ಬಿ ಶೆಟ್ಟಿ, ಜೊತೆ ಕಾರ್ಯದರ್ಶಿ ಗಿರೀಶ್ ಆರ್ ಶೆಟ್ಟಿ ತೆಳ್ಳಾರ್, ಜೊತೆ ಕೋಶಾಧಿಕಾರಿ ಶಶಿಧರ ಕೆ. ಶೆಟ್ಟಿ ಇನ್ನಂಜೆ, ಪಶ್ಚಿಮ ವಲಯದ ಪ್ರಾದೇಶಿಕ ಸಮಿತಿಗಳ ಸಮನ್ವಯಕ ಖಾಂದೇಶ್ ಭಾಸ್ಕರ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಚಿತ್ರಾ ಅರ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಸವಿನ್ ಜೆ ಶೆಟ್ಟಿ, ಪ್ರಾದೇಶಿಕ ಸಮಿತಿಯ ಉಪ ಕಾರ್ಯಾಧ್ಯಕ್ಷ ಗಂಗಾಧರ ಎ. ಶೆಟ್ಟಿ, ಕಾರ್ಯದರ್ಶಿ ರಮೇಶ್ ಎಂ ಶೆಟ್ಟಿ, ಕೋಶಾಧಿಕಾರಿ ಅವಿನಾಶ್ ಎಂ ಶೆಟ್ಟಿ, ಜೊತೆ ಕಾರ್ಯದರ್ಶಿ ಜಯ ಶೆಟ್ಟಿ, ಜತೆ ಕೋಶಾಧಿಕಾರಿ ರಮೇಶ್ ಹೆಚ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುನಿತಾ ಎನ್. ಹೆಗ್ಡೆ, ಸಂಚಾಲಕಿ ಶೈಲಜಾ ಎ. ಶೆಟ್ಟಿ, ಉಪ ಕಾರ್ಯಾಧ್ಯಕ್ಷೆ ರೇಖಾ ವೈ ಶೆಟ್ಟಿ, ಕಾರ್ಯದರ್ಶಿ ಸರಿತಾ ಎಂ ಶೆಟ್ಟಿ, ಕೋಶಾಧಿಕಾರಿ ಶುಭಾಂಗಿ ಎಸ್ ಶೆಟ್ಟಿ, ಜತೆ ಕಾರ್ಯದರ್ಶಿ ಯೋಗಿನಿ ಎಸ್ ಶೆಟ್ಟಿ, ಜೊತೆ ಕೋಶಾಧಿಕಾರಿ ಪ್ರಭಾವತಿ ಹೆಚ್ ಶೆಟ್ಟಿ, ಯುವ ವಿಭಾಗದ ಕಾರ್ಯಾಧ್ಯಕ್ಷ ಅಕ್ಷಜ್ ಆರ್. ಶೆಟ್ಟಿ, ಸಾಹಿತ್ಯ ಮತ್ತು ಸಾಂಸ್ಕೃತಿಕ ವಿಭಾಗದ ಕಾರ್ಯಾಧ್ಯಕ್ಷೆ ಗೀತಾ ಎಸ್ ಶೆಟ್ಟಿ, ಮುಖ್ಯ ಸಲಹೆಗಾರರಾದ ಮುಂಡಪ್ಪ ಎಸ್ ಪಯ್ಯಡೆ, ಮನೋಹರ ಎನ್. ಶೆಟ್ಟಿ, ಎನ್ ನಿತ್ಯಾನಂದ ಹೆಗ್ಡೆ, ವಿಜಯ ಆರ್. ಭಂಡಾರಿ ಮತ್ತು ರವೀಂದ್ರ ಎಸ್ ಶೆಟ್ಟಿ ಮತ್ತು ಎರ್ಮಾಳು ಹರೀಶ್ ಶೆಟ್ಟಿಯವರು ತಿಳಿಸಿರುತ್ತಾರೆ. ಪ್ರಾದೇಶಿಕ ಸಮಿತಿಯ ವ್ಯಾಪ್ತಿಯಲ್ಲಿರುವ ಎಲ್ಲಾ ಕಲಾಭಿಮಾನಿಗಳು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷರಾದ ಪ್ರೇಮನಾಥ ಶೆಟ್ಟಿ ಕೊಂಡಾಡಿಯವರು ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಿರುತ್ತಾರೆ.