ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಕುಂದಾಪುರ ತಾಲೂಕು ಮತ್ತು ಸೈಂಟ್ ಫ್ರಾನ್ಸಿಸ್ ಕ್ಸೆವಿಯರ್ ಆಂಗ್ಲ ಮಾಧ್ಯಮ ಶಾಲೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿರುವ ಉಡುಪಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆಯ ಇಬ್ಬರು ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 17 ವಯೋಮಾನದ ಬಾಲಕಿಯರ 56 ಕೆಜಿ ವಿಭಾಗದಲ್ಲಿ 10ನೇ ತರಗತಿಯ ಪ್ರತೀಕ್ಷಾ ಪಿ. ಮತ್ತು 10ನೇ ತರಗತಿಯ ಪ್ರೀತಂ ಕುಲಾಲ್ 17 ವಯೋಮಾನದ 58 ಕೆಜಿ ಬಾಲಕರ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನದೊಂದಿಗೆ ವಿಜಯ ಶಾಲಿಯಾಗಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಉಳಿದಂತೆ, 17ರ ವಯೋಮಾನದ ಹುಡುಗಿಯರ ವಿಭಾಗದಲ್ಲಿ 9ನೇ ತರಗತಿಯ ಶ್ರಾವಣಿ ಶೆಟ್ಟಿ 60 ಕೆಜಿ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾಳೆ.


ವಿಜೇತರಿಗೆ ಸಮಾರೋಪ ಸಮಾರಂಭದಲ್ಲಿ ಪಾರಿತೋಷಕ, ಮತ್ತು ಪ್ರಶಸ್ತಿ ಪತ್ರಗಳನ್ನು ನೀಡಿ ಪ್ರೋತ್ಸಾಹದ ನುಡಿಗಳನ್ನಾಡಲಾಯಿತು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸತೀಶ್ ಕುಮಾರ್ ಮತ್ತು ಸೂರ್ಯ ಮಾರ್ಗದರ್ಶನ ನೀಡಿದ್ದರು. ದೈಹಿಕ ಶಿಕ್ಷಣ ಶಿಕ್ಷಕಿ ಕಾವ್ಯ ಶೆಟ್ಟಿ ತಂಡದ ವ್ಯವಸ್ಥಾಪಕಿಯಾಗಿ ಕಾರ್ಯ ನಿರ್ವಹಿಸಿದ್ದರು. ಇದೇ ವೇಳೆ ಸುಜ್ಞಾನ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಡಾ| ರಮೇಶ್ ಶೆಟ್ಟಿ, ಕಾರ್ಯದರ್ಶಿಗಳಾದ ಪ್ರತಾಪ್ ಚಂದ್ರ ಶೆಟ್ಟಿ, ಖಜಾಂಚಿ ಭರತ್ ಶೆಟ್ಟಿ ಹಾಗೂ ಮುಖ್ಯೋಪಾಧ್ಯಾಯರಾದ ಪ್ರದೀಪ್. ಕೆ ವಿಜೇತರನ್ನು ಅಭಿನಂದಿಸಿದರು. ಸುಜ್ಞಾನ ಎಜುಕೇಶನ್ ಟ್ರಸ್ಟ್ ನ ಸಂಸ್ಥೆಗಳಾದ ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ ಮತ್ತು ಸುಜ್ಞಾನ ಪದವಿ ಪೂರ್ವ ಕಾಲೇಜಿನ ಎಲ್ಲಾ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳ ಉತ್ತಮ ಪ್ರದರ್ಶನದ ಬಗ್ಗೆ ಸಂತಸ ವ್ಯಕ್ತಪಡಿಸಿದರು.









































































































