ಮಡಿಬೆಟ್ಟು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕಣಂಜಾರಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಬ್ರಹ್ಮಲಿಂಗೇಶ್ವರ ಎಜ್ಯುಕೇಶನ್ ಟ್ರಸ್ಟ್ ನ ಅಧ್ಯಕ್ಷರಾದ ಶಿವಪ್ರಸಾದ್ ಹೆಗ್ಡೆಯವರು ಧ್ವಜಾರೋಹಣ ನೆರವೇರಿಸುವುದರೊಂದಿಗೆ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು. ನಂತರ ಸಭಾ ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಉಪಾಧ್ಯಕ್ಷರಾದ ಮಂಜುನಾಥ ನಾಯಕ್, ಟ್ರಸ್ಟಿಗಳಾದ ವಿಕ್ರಂ ಹೆಗ್ಡೆ, ಶ್ರೀ ಬ್ರಹ್ಮಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಸುಧೀರ್ ಹೆಗ್ಡೆ, ಶಾಲಾ ಸಂಚಾಲಕರಾದ ಸಿಎ ಚಂದನ್ ಹೆಗ್ಡೆ, ಟ್ರಸ್ಟ್ ನ ಕೋಶಾಧಿಕಾರಿ ಪ್ರಕಾಶ್ ಪ್ರಭು, ಮೇಲ್ಬಂಟ ಫ್ರೆಂಡ್ಸ್ ಅಧ್ಯಕ್ಷರಾದ ಮಹೇಶ್ ಹೆಗ್ಡೆ, ಪೆಲತ್ತೂರು ಫ್ರೆಂಡ್ಸ್ ನ ಅಧ್ಯಕ್ಷರಾದ ಸುರೇಶ್ ಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯರಾದ ಹರಿದಾಸ್ ನಾಯಕ್ ಹಾಗೂ ದಿನೇಶ್ ಯು.ಎಸ್, ಪಂಚಾಯತ್ ಸದಸ್ಯರಾದ ಶಿವಪ್ರಸಾದ್ ರಾವ್, ಊರಿನ ಹಿರಿಯರು, ಸ್ಥಳೀಯರು, ಹಳೆ ವಿದ್ಯಾರ್ಥಿಗಳು ಹಾಗೂ ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು.

ಈ ಹಿಂದಿನ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಶಾಲಾ ಹಳೆ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಏರ್ಪಡಿಸಲಾಯಿತು. ಶಾಲಾ ಪ್ರಭಾರ ಮುಖ್ಯ ಶಿಕ್ಷಕ ಅಶ್ವತ್ಥ ಭಾರಧ್ವಾಜ್ ಕೆ ಸರ್ವರನ್ನು ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕಿಯರಾದ ಸುಜಾತ, ರಾಧ, ಸುಭದ್ರಾ ಕಾರ್ಯಕ್ರಮ ನಿರೂಪಿಸಿದರು. ಕಾವ್ಯ ಹಾಗೂ ರಮ್ಯಾ ವಂದನಾರ್ಪಣೆಗೈದರು.