ಬೆಳ್ಮಣ್ ವಲಯ ಬಂಟರ ಯಾನೆ ನಾಡವರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ ಹಾಗೂ ವಾರ್ಷಿಕ ಸಮಾವೇಶ ಆಗಸ್ಟ್ 24ರಂದು ಬೆಳ್ಮಣ್ ನ ಹೋಟೆಲ್ ಸೂರಜ್ ಇನ್ ಸಭಾಂಗಣದಲ್ಲಿ ನಡೆಯಿತು. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿಯವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನೂತನ ಪದಾಧಿಕಾರಿಗಳಿಗೆ ಶುಭ ಹಾರೈಸಿದರು. ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿಯವರು ನೂತನ ಪದಾಧಿಕಾರಿಗಳಿಗೆ ಪದಪ್ರಧಾನ ನೆರವೇರಿಸಿ ಪ್ರತಿಜ್ಞಾವಿಧಿ ಬೋಧಿಸಿದರು. ಮುನಿಯಾಲು ಉದಯ ಕೃಷ್ಣ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷ ಉದಯ್ ಕುಮಾರ್ ಶೆಟ್ಟಿ ಮುನಿಯಾಲ್ ಸಂದರ್ಭೋಚಿತ ಮಾತುಗಳನ್ನಾಡಿದರು. ಮೂಡಬಿದ್ರಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಉಪನ್ಯಾಸಕಿ ಸುಧಾರಾಣಿಯವರು ಬಂಟ ಸಮುದಾಯದ ಹಿನ್ನೆಲೆ, ಸಂಪ್ರದಾಯದ ಬಗ್ಗೆ ದಿಕ್ಸೂಚಿ ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ಮುಂಬೈಯ ಉದ್ಯಮಿ ಕೃಷ್ಣ ಶೆಟ್ಟಿ ಕಾಪಿಕೆರೆ ನಂದಳಿಕೆ, ಬಾಂಬೆ ಬಂಟ್ಸ್ ಅಸೋಸಿಯೇಷನ್ ಇದರ ನಿಕಟಪೂರ್ವ ಅಧ್ಯಕ್ಷ ಸಿಎ ಸುರೇಂದ್ರ ಶೆಟ್ಟಿ, ಬೆಂಗಳೂರು ಬಂಟರ ಸಂಘದ ಅಧ್ಯಕ್ಷ ಸಿಎ ಅಶೋಕ್ ಶೆಟ್ಟಿ, ಗೌರವ ಕಾರ್ಯದರ್ಶಿ ವಿಜಯ ಜೆ ಶೆಟ್ಟಿ ಹಾಲಾಡಿ, ವಿದ್ಯಾರ್ಥಿವೇತನ ಮತ್ತು ಪ್ರಶಸ್ತಿ ಸಮಿತಿ ಅಧ್ಯಕ್ಷ ಉಮೇಶ್ ಕುಮಾರ್ ಶೆಟ್ಟಿ, ಉದ್ಯಮಿ, ಸ್ಥಳದಾನಿ ರವಿ ಶೆಟ್ಟಿ ಇನ್ನ, ಖ್ಯಾತ ಸಾಹಿತಿ ಇಂದಿರಾ ಹೆಗ್ಡೆ ಶಿರ್ವ ಮತ್ತು ಉಡುಪಿ ಗ್ರಾಮೀಣ ಬಂಟರ ಸಂಘ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದು, ಶುಭ ಹಾರೈಸಿದರು. ಬಂಟರ ಯಾನೆ ನಾಡವರ ಸಂಘ ಬೆಳ್ಮಣ್ ವಲಯ ಇದರ ಅಧ್ಯಕ್ಷ ಸುಹಾಸ್ ಹೆಗ್ಡೆ ನಂದಳಿಕೆ ಸಭಾಧ್ಯಕ್ಷತೆಯನ್ನು ವಹಿಸಿದ್ದರು. ಈ ಸಂದರ್ಭದಲ್ಲಿ ಏಳು ಗ್ರಾಮದಲ್ಲಿ ಕೀರ್ತಿಶೇಷರಾದ ಹಿರಿಯ ಚೇತನಗಳಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಬೆಳ್ಮಣ್ ವಲಯ ವ್ಯಾಪ್ತಿಯ 90 ವರ್ಷ ಮೇಲ್ಪಟ್ಟ ಹಿರಿಯ ನಾಗರೀಕರನ್ನು ಗುರುತಿಸಿ ಗೌರವಿಸಲಾಯಿತು. ವಿದ್ಯಾರ್ಥಿಗಳ ಶಾಶ್ವತ ದತ್ತಿನಿಧಿಗೆ ಸಹಕರಿಸಿದ ದಾನಿಗಳನ್ನು ಗೌರವಿಸಲಾಯಿತು. ವಿದ್ಯಾರ್ಥಿವೇತನ, ವಿಶೇಷ ಕಲಿಕಾ ಪ್ರೋತ್ಸಾಹ ಧನ ಹಾಗೂ ಗ್ರಾಮವಾರು ಕಲಿಕಾ ಪ್ರೋತ್ಸಾಹ ಧನ ಹೀಗೆ ವಿವಿಧ ಸ್ತರಗಳಲ್ಲಿ ವಿದ್ಯಾರ್ಥಿಗಳನ್ನು ಗುರುತಿಸಿ 2,50,500 ರೂಪಾಯಿ ಮೊತ್ತದ ಪ್ರೋತ್ಸಾಹ ಧನವನ್ನು ವಿತರಿಸಲಾಯಿತು.


ವೇದಿಕೆಯಲ್ಲಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಎಂ ವಿಠಲ ಶೆಟ್ಟಿ ಬೇಲಾಡಿ, ಕಾರ್ಯದರ್ಶಿ ರಿತೇಶ್ ಕುಮಾರ್ ಶೆಟ್ಟಿ ಸೂಡಾ, ಬಂಟರ ಸಂಘದ ಯುವ ವಿಭಾಗದ ಅಧ್ಯಕ್ಷ ನಿರಂಜನ ಶೆಟ್ಟಿ, ನೂತನ ಗೌರವಾಧ್ಯಕ್ಷ ಕೃಷ್ಣ ರೈ, ಬಂಟರ ಸಂಘ ಯುವ ವಿಭಾಗದ ನೂತನ ಅಧ್ಯಕ್ಷ ಮನೀಶ್ ಶೆಟ್ಟಿ, ಕಾರ್ಯದರ್ಶಿ ಸ್ವರೂಪ ಶೆಟ್ಟಿ ನಂದಳಿಕೆ, ಕೋಶಾಧಿಕಾರಿ ಧೀರಜ್ ಶೆಟ್ಟಿ ಕಲ್ಯಾ, ಮೋಹನ್ ದಾಸ್ ಶೆಟ್ಟಿ ಕಡಂಗಲ್, ಸಂಜೀವ ಶೆಟ್ಟಿ ಕಲ್ಯಾ, ಕಿರಣ್ ಶೆಟ್ಟಿ ನಂದಳಿಕೆ, ರೀತೇಶ್ ಶೆಟ್ಟಿ ಬೋಳ, ಜಯಂತಿ ಶೆಟ್ಟಿ, ದಿಲೀಪ್ ಶೆಟ್ಟಿ ಕಾಂತಾವರ, ರವಿರಾಜ್ ಶೆಟ್ಟಿ, ಕಲ್ಯಾ ಗ್ರಾಮ ಸಮಿತಿಯ ಪೂರ್ವಾಧ್ಯಕ್ಷ ಸುಧೀರ್ ಶೆಟ್ಟಿ ಉಪಸ್ಥಿತರಿದ್ದರು.


ಪ್ರಮೀಳಾ ಸತೀಶ್ ಶೆಟ್ಟಿ ಪ್ರಾರ್ಥನೆಗೈದರು. ಸ್ಥಾಪಕ ಅಧ್ಯಕ್ಷ ಎನ್ ಶೋಧನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಗೌರವಾಧ್ಯಕ್ಷ ಎನ್ ತುಕರಾಮ ಶೆಟ್ಟಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಬೋಳ ಸತೀಶ ಶೆಟ್ಟಿ ವಂದನಾರ್ಪಣೆಗೈದರು. ನಿಷ್ಮಿತಾ ಶೆಟ್ಟಿ ಮೂಡುಮನೆ ಮತ್ತು ಮನೀಶ್ ಶೆಟ್ಟಿ ಕಾಂತಾವರ ಕಾರ್ಯಕ್ರಮ ನಿರೂಪಿಸಿದರು. ಬಳಿಕ ರೂಪರಾಣಿ ಶೆಟ್ಟಿ ನೇತೃತ್ವದಲ್ಲಿ ಬಂಟ ಸದಸ್ಯರಿಂದ ಮನೋರಂಜನಾ ಕಾರ್ಯಕ್ರಮ ನೆರವೇರಿತು. ಶರತ್ ಶೆಟ್ಟಿ ಸಚ್ಚೆರಿಪೇಟೆ ಸಾಂಸ್ಕೃತಿಕ ಕಾರ್ಯಕ್ರಮ ನೆರವೇರಿಸಿದರು.
