ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನ, ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಓಂಕಾರನಗರ ಬಂಟ್ಸ್ ಹಾಸ್ಟೇಲ್ ಮಂಗಳೂರು ಇದರ ಆಶ್ರಯದಲ್ಲಿ ಬಂಟ್ಸ್ ಹಾಸ್ಟೇಲ್ ನ ಓಂಕಾರ ನಗರದಲ್ಲಿ ನಡೆದ ‘ಲಾಸ್ಯ -2025’ ಬಂಟರ ನೃತ್ಯ ಸ್ಫರ್ಧೆಯಲ್ಲಿ 50 ಸಾವಿರ ನಗದು, ಪ್ರಶಸ್ತಿ ಪತ್ರದೊಂದಿಗೆ ಸುರತ್ಕಲ್ ಬಂಟರ ಸಂಘ ಪ್ರಥಮ ಸ್ಥಾನವನ್ನು ಗಳಿಸಿದೆ. ಸುರತ್ಕಲ್ ಬಂಟರ ಸಂಘದ 32 ಮಂದಿ ಸದಸ್ಯರು ರಾಜಸ್ತಾನಿ ನೃತ್ಯವನ್ನು ಪ್ರದರ್ಶಿಸುವುದರ ಮೂಲಕ ಜನರ ಮೆಚ್ಚುಗೆ ಪಡೆದಿತ್ತು. ಬಳಿಕ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ, ಶ್ರೀ ಸಿದ್ದಿವಿನಾಯಕ ಪ್ರತಿಷ್ಠಾನದ ಟ್ರಸ್ಟಿ ಕೊಡಿಯಾಲ್ ಗುತ್ತು ಅಜಿತ್ ಕುಮಾರ್ ರೈ ಮಾಲಾಡಿ ಪ್ರಶಸ್ತಿಯನ್ನು ವಿತರಿಸಿದರು.

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಬಾಳ ಜಗನ್ನಾಥ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿಗಳಾದ ದೇವೇಂದ್ರ ಶೆಟ್ಟಿ, ಆಶಾ ಕಿರಣ್ ರೈ ಪ್ರಶಸ್ತಿಯನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ನಿಕಟ ಪೂರ್ವ ಅಧ್ಯಕ್ಷ ಲೋಕಯ್ಯ ಶೆಟ್ಟಿ ಮುಂಚೂರು, ಸುರತ್ಕಲ್ ಬಂಟರ ಸಂಘದ ಉಪಾಧ್ಯಕ್ಷ ಪ್ರವೀಣ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಲೀಲಾಧರ ಶೆಟ್ಟಿ, ಕೋಶಾಧಿಕಾರಿ ರತ್ನಾಕರ ಶೆಟ್ಟಿ, ಸಂಘಟನಾ ಕಾರ್ಯದರ್ಶಿ ಪುಷ್ಪರಾಜ ಶೆಟ್ಟಿ ಕುಡುಂಬೂರು, ಕಾರ್ಯಕಾರಿ ಸಮಿತಿ ಸದಸ್ಯರಾದ ಗಿರೀಶ್ ಎಂ ಶೆಟ್ಟಿ, ಮಹಿಳಾ ವೇದಿಕೆಯ ಅಧ್ಯಕ್ಷೆ ಸರೋಜ ಟಿ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಾಜೇಶ್ವರಿ ಡಿ ಶೆಟ್ಟಿ ಉಪಸ್ಥಿತರಿದ್ದರು. ಲಾಸ್ಯ 2025 ನೃತ್ಯ ಸ್ಪರ್ಧೆಯಲ್ಲಿ ದ್ವೀತಿಯ ಪ್ರಶಸ್ತಿಯನ್ನು ಎಕ್ಕಾರು ಬಂಟರ ಸಂಘ ಹಾಗೂ ತೃತೀಯ ಪ್ರಶಸ್ತಿಯನ್ನು ಮೂಡಬಿದ್ರೆ ಬಂಟರ ಸಂಘ ಪಡೆಯಿತು.





































































































